
ದೊಡ್ಡನ ಗುಡ್ಡೆ : ಉಡುಪಿ ಜಿಲ್ಲೆಯ ನಗರದ ಆಯುರ್ವೇದ ಆಸ್ಪತ್ರೆಯಲ್ಲಿ ಬೆಂಕಿ ಬಿದ್ದಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ. ದೊಡ್ಡನಗುಡ್ಡೆ ಬಬ್ಬುಸ್ವಾಮಿ ದೈವಸ್ಥಾನ ಬಳಿಯ ಧನ್ವಂತರಿ ಆಯುರ್ವೇದ ಆಸ್ಪತ್ರೆಗೆ ಬೆಂಕಿ ತಗುಲಿದೆ. ದೊಡ್ಡನ ಗುಡ್ಡೆ ಕಟ್ಟಡದ ನವೀಕರಣ ಆಗುತ್ತಿದ್ದರಿಂದ ಬ್ಲಾಕ್ಗೆ ಬೆಂಕಿ ತಗುಲಿದೆ. ಆದರೆ ಆ ಕಟ್ಟಡದಲ್ಲಿ ರೋಗಿಗಳು ಇರಲಿಲ್ಲ ಎಂದು ಹೇಳಲಾಗಿದೆ.
ಆಸ್ಪತ್ರೆಯ ದೈನಂದಿನ ಕೆಲಸಕ್ಕೆ ಬರುವ ಮಹಿಳೆ ಬೆಂಕಿ ಗಮನಿಸಿ ಮಾಹಿತಿ ನೀಡಿದ್ದಾರೆ. ಕಟ್ಟಡದ ಮೇಲ್ಮಹಡಿಯಲ್ಲಿ ಹೊತ್ತಿ ಉರಿದಿದೆ. ಮೊದಲ ಮಹಡಿಯಲ್ಲಿದ್ದ ಇಬ್ಬರು ಕಾರ್ಮಿಕರು ಪ್ರಾಣ ಅಪಾಯದಿಂದ ಪಾರಾಗಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗಲಿರುವ ಸಾಧ್ಯತೆ ಎಂದು ಹೇಳಲಾಗಿದೆ. ಅಗ್ನಿಶಾಮಕದ ಎರಡು ವಾಹನಗಳಿಂದ ಕಾರ್ಯಾಚರಣೆ ನಡೆಸಿದೆ. ಅಗ್ನಿಶಾಮಕ ಸಿಬ್ಬಂದಿಗಳು ಈಗಾಗಲೇ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.