ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಮಕ್ಕಳ ಜೊತೆ ಮಕ್ಕಳಾಗಿ ಕೆಸರಿನಲ್ಲಿ ಕುಣಿದ್ದಿದ್ದಾರೆ. ಇದೀಗ ಈ ದೃಶ್ಯ ಜಿಲ್ಲೆಯ ಜನರಿಗೆ ಅಚ್ಚರಿ ಉಂಟಾಗಿದೆ. ಜಿಲ್ಲಾಧಿಕಾರಿಯ ಜತೆಗೆ ಅಲ್ಲಿನ ಜನ ಕೂಡ ಸಂಭ್ರಮಿಸಿದರು. ಅನಂತಾಡಿ ಗ್ರಾಮದ ಭಾರತ್ ಯುವಕ ಸಂಘದ ವತಿಯಿಂದ ಪಡಿಪಿರೆ ಗದ್ದೆಯಲ್ಲಿ ಜರಗಿದ 6ನೇ ವರ್ಷದ ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ, ರೈತ ದೇಶದ ಬೆನ್ನೆಲುಬು, ಅವರು ಸಂತೋಷದಿಂದಿದ್ದರೆ ಇಡೀ ಜಗತ್ತೇ ಸಂತಸ ಪಡುವುದು, ಪ್ರತಿಯೊಬ್ಬರ ಆಹಾರವನ್ನು ಪೂರೈಸಿ ಎಲ್ಲರ ಹಸಿವು ನೀಗಿಸುವ ರೈತ ಯಾವಾಗಲೂ ಸಂತೋಷವಾಗಿರಬೇಕು. ಜಿಲ್ಲೆಯ ಹವಾಮಾನದ ಬದಲಾವಣೆ ಆಗುತ್ತಿರುತ್ತದೆ ಅದನ್ನು ದಾಟಿ ರೈತ ಬದುಕಬೇಕಾಗುತ್ತದೆ. ಈ ನೆಲದ ಸಂಸ್ಕೃತಿಯು ಬೆಳೆದು ಬಂದಿರುವುದು ಗದ್ದೆಗಳಿಂದ ಎಂದರು.

ಇನ್ನು ವಿಶೇಷವಾಗಿ ಜಿಲ್ಲಾಧಿಕಾರಿಗಳ ಕುಟುಂಬ ಕೂಡ ಬಂದಿತ್ತು ಅವರ ಮಡದಿ, ಮಗು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತ್ ಯುವಕ ಸಂಘದ ಅಧ್ಯಕ್ಷರಾದ ಅನೀಶ್ ಅಶ್ವತ್ತಾಡಿ ವಹಿಸಿದ್ದರು. ಕಾರ್ಯಕ್ರಮದ ಧ್ವಜಾರೋಹಣವನ್ನು ಡಾಕ್ಟರ್ ರೂಪಲತಾ ಕೊಂಗಲಾಯಿ ನೆರವೇರಿಸಿ, ಸಭಾ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಮಾಣಿ ವಲಯ ಅಧ್ಯಕ್ಷರಾದ ರಾಮ್ ಕಿಶಾನ್ ರೈ ಉದ್ಘಾಟಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರ ಸಂಘದ ಮಾಜಿ ಅಧ್ಯಕ್ಷರಾದ ಸಂಜೀವ ಪೂಜಾರಿ ಹಾಗೂ ವಿಠಲ ಕೋಟ್ಯಾನ್ ಪೊಯ್ಯೇ ಕ್ರೀಡಾಕೂಟದ ಕೆಸರುಗದ್ದೆಯ ಉದ್ಘಾಟನೆ ಮಾಡಿದರು. ಇನ್ನು ಈ ಕಾರ್ಯಕ್ರಮದ ವೇದಿಕೆಯಲ್ಲಿ ಮಾಣಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಿರಣ್ ಹೆಗ್ಡೆ, ನಿವೃತ್ತ ಶಿಕ್ಷಕ ರಾಮಣ್ಣ ಗೌಡ ಕೋಂಗಲಾಯಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ನಾರ್ಶ ಮುಖ್ಯ ಶಿಕ್ಷಕ ಗೋಪಾಲಕೃಷ್ಣ ನೆರಳಕಟ್ಟೆ, ಸರಕಾರಿ ಪದವಿ ಪೂರ್ವ ಕಾಲೇಜು ವಾಮದಪದವಿನ ರಾಧಾಕೃಷ್ಣ ಮೂಲ್ಯ, ಮಲ್ಲರಾಯ ದೈವ ಪರಿಚರಕರುಗಳಾದ ರಾಮಣ್ಣ ಗೌಡ, ಬಾಲಪ್ಪ ಮಡಿವಾಳ, ಲಕ್ಷ್ಮಣ ಪೂಜಾರಿ ಬಾಕಿಲ, ಪದ್ಮನಾಭ ಪೂಜಾರಿ ಈಡೆಮುಂಡೆವು ಮೊದಲಾದವರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *