
ಬಂಟ್ವಾಳ: ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಸ್ಕೂಲ್ ಬಸ್ವೊಂದರ ಚಾಲಕ ಬಸ್ನಲ್ಲಿ ಮೂರ್ಚೆ ಹೋಗಿರುವ ಘಟನೆ ನಡೆದಿದೆ. ಪೊಳಲಿ ಸಮೀಪದ ಬಡಕಬೈಲು ಎಂಬಲ್ಲಿ ಈ ಅಪಘಾತ ನಡೆದಿದೆ. ಬಸ್ ಚಾಲಕನಿಗೆ ಮೂರ್ಚೆ ರೋಗ ( ಪಿಡ್ಸ್) ಉಂಟಾಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಬಸ್ ಚಾಲಕ ಅಡ್ಡೂರು ನಿವಾಸಿ ಸುರೇಶ್ ಎಂದು ಹೇಳಲಾಗಿದೆ. ಚಾಲಕನಿಗೆ ಪಿಡ್ಸ್ ಶುರುವಾಗಿದ್ದು, ರಸ್ತೆ ಬದಿಗೆ ತೆರಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದಿದೆ. ಬಡಕಬೈಲು ಸೈಂಟ್ ಡೊಮಿನಿಕ್ ಆಂಗ್ಲ ಮಾಧ್ಯಮ ಶಾಲೆಯ ಬಸ್ ಎಂದು ಹೇಳಲಾಗಿದೆ.
ಇನ್ನು ಈ ಘಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ, ಎಲ್ಲ ವಿದ್ಯಾರ್ಥಿಗಳು ಅಪಘಾತದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಇನ್ನು ಚಾಲಕನಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗೆ ಸಾಗಿಸಲಾಗಿದೆ.