ಗಂಡಹೆಂಡತಿ ಜಗಳದಲ್ಲಿ ಹೆಂಡತಿಯನ್ನು ದೂಡಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಮಹಿಳೆಯು, ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟ ಘಟನೆಯು ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ದೇವಿನಗರ ನಿವಾಸಿ ಲೀಲಾ (45) ಎಂದು ಗುರುತಿಸಲಾಗಿದ್ದು, ಪ್ರತಿದಿನ ಕುಡಿದು ಬಂದು ಗಲಾಟೆ ಮಾಡುತಿದ್ದ ಸಂಜೀವನು ಗಲಾಟೆ ಮಾಡಿ ಹೆಂಡತಿಯನ್ನು ದೂಡಿ ಹಾಕಿದ್ದಾನೆ ಎನ್ನುವ ಸ್ಥಳೀಯರು ಆರೋಪಿಸಿದ್ದಾರೆ.

ಈ ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳೀಯರು ಕೂಡಲೇ ಮಹಿಳೆಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೇ ನಿನ್ನೆ ಮುಂಜಾನೆ ಲೀಲಾರವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೃತರು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ವಿಟ್ಲ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದು, ಈ ಪ್ರಕರಣ ಸಹಜ ಸಾವಿನಂತಿದ್ದರೂ ಪೊಲೀಸ್ ತನಿಖೆ ಬಳಿಕ ಇದು ಕೊಲೆ ಎಂದು ಶಂಕೆ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಆರೋಪಿ ಸಂಜೀವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

By suddi9

Leave a Reply

Your email address will not be published. Required fields are marked *