ಬಂಟ್ವಾಳ:ತಾಲ್ಲೂಕಿನ ಪಂಜಿಕಲ್ಲು ಗ್ರಾಮದ ಬಾಲೇಶ್ವರ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ವತಿಯಿಂದ ಇದೇ 14ರಂದು ಬ್ರಹ್ಮಶ್ರೀ ಗುರುಮೂತರ್ಿ ಪ್ರತಿಷ್ಠಾ ಮಹೋತ್ಸವ ಮತ್ತು ದ್ವಿತೀಯ ವರ್ಷದ ವಾಷರ್ಿಕೋತ್ಸವ ನಡೆಯಲಿದೆ.
ಅಂದು ಬೆಳಿಗ್ಗೆ ಗಣಹೋಮ, ಭಜನೆ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಪುಷ್ಪಾಲಂಕಾರ ಪೂಜೆ, ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ಹಾಗೂ ಸಂಜೆ ಕುಡ್ಲ ಅಮ್ಮ ಕಲಾವಿದೆರ್ ತಂಡದಿಂದ .ಮದಿಮೆದ ದುಂಬುನಾನಿ’ ತುಳು ನಾಟಕ ಪ್ರದರ್ಶನಗೊಳ್ಳಲಿದೆ.
ರಾತ್ರಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಅಧ್ಯಕ್ಷ ಜಯ ಸಿ.ಸುವರ್ಣ, ಬಂಟ್ವಾಳ ತಾಲ್ಲೂಕು ಬಿಲ್ಲವ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್, ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಉಮಾನಾಥ ಕೋಟ್ಯಾನ್, ಅಂತರ್ರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಮಮತಾ ಪೂಜಾರಿ ಮತ್ತಿತರ ಗಣ್ಯರು ಭಾಗವಹಿಸಲಿದ್ದು, ಸ್ಥಳೀಯ ಬಳ್ಳಿದೋಡಿ ನಿವಾಸಿ ಲಿಂಗಪ್ಪ ಪೂಜಾರಿ ಮತ್ತು ಪಂಜಿಕಲ್ಲುಗುತ್ತು ನಿವಾಸಿ ಕೃಷ್ಣರಾಜ ಜೈನ್ ಇವರನ್ನು ಸನ್ಮಾನಿಸಲಾಗುವುದು ಎಂದು ಸಂಘದ ಅಧ್ಯಕ್ಷ ಪ್ರಕಾಶ ಅಂಚನ್ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *