ಗುರುಪುರ : ರಾಷ್ಟ್ರೀಯ ಹೆದ್ದಾರಿ ೧೬೯ ರ ಗುರುಪುರ ಕುಕ್ಕುದಕಟ್ಟೆಯಲ್ಲಿ ಮಂಗಳೂರು ಕಡೆಯಿಂದ ಗುರುಪುರ ಕೈಕಂಬದತ್ತ ಅತಿಯಾದ ವೇಗದಲ್ಲಿ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಸಾಗುತ್ತಿದ್ದ ರಿಕ್ಷಾದ ಹಿಂಬದಿಗೆ ಡಿಕ್ಕಿಯಾಗಿದ್ದು, ರಿಕ್ಷಾ ಪಲ್ಟಿ ಹೊಡೆದಿದೆ.

ರಿಕ್ಷಾದಲ್ಲಿದ್ದ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರಲ್ಲಿ ಗರ್ಭಿಣಿ ಮಹಿಳೆ ತೀವ್ರ ಗಾಯಗೊಂಡಿದ್ದರೆ, ಚಾಲಕ ಹಾಗೂ ಇನ್ನೊಬ್ಬರಿಗೆ ಸಾಮಾನ್ಯ ಗಾಯಗಳಾಗಿವೆ

ಸೋಮವಾರ ಸಂಜೆ ಅಪಘಾತ ಸಂಭವಿಸಿದೆ. ಇಬ್ಬರು ಪ್ರಯಾಣಿಕರಿದ್ದ ರಿಕ್ಷಾವು ಕೈಕಂಬದತ್ತ ಹೋಗುತ್ತಿತು. ಮೂಡಬಿದ್ರೆಯತ್ತ ಸಾಗುತ್ತಿದ್ದ ಸ್ವಿಫ್ಟ್ ಕಾರು, ರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಗಾಯಾಳು ಮಹಿಳೆ ಹಾಗೂ ಇತರ ಇಬ್ಬರು ಗಾಯಾಳುಗಳನ್ನು ತಕ್ಷಣ ಗುರುಪುರದ ಸೇವಾ ಬ್ರಿಗೇಡ್ ಆ್ಯಂಬುಲೆನ್ಸ್ನಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

By suddi9

Leave a Reply

Your email address will not be published. Required fields are marked *