ಸುದ್ದಿ9 ಬಂಟ್ವಾಳ: ಪ್ರತಿಯೊಬ್ಬರು ಅಕ್ಷರಜ್ಞಾನಿಗಳಾದ ಮಾತ್ರ ಶೋಷಣೆ ಮುಕ್ತ ಸಮಾಜ ನಿರ್ಮಾಣಗೊಳ್ಳುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮನಾಥ ರೈ ಹೇಳಿದರು.
ಬಿ.ಸಿ.ರೋಡಿನ ಕೈಕುಂಜೆಯಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿಯ ನೂತನ ಸಭಾಂಗಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯೆ ವ್ಯಕ್ತಿಗೆ ಸ್ವಾಭಿಮಾನ ಹಾಗೂ ಸಾಮಾಜಿಕ ಗೌರವ ಕೊಡುತ್ತದೆ. ಅಂತಹ ವಿದ್ಯೆಯನ್ನು ಧಾರೆ ಎರೆಯುವವರು ಶಿಕ್ಷಕರು. ಶಿಕ್ಷಕರು ಸ್ವಲ್ಪ ಎಡವಿದರೂ ಸಮಾಜ ಅವರ ತಪ್ಪನ್ನು ಗುರುತಿಸುತ್ತದೆ. ಆದ್ದರಿಂದ ಸತ್ಪ್ರಜೆಗಳನ್ನು ರೂಪಿಸುವ ಶಿಕ್ಷಕರು ಎಲ್ಲರಿಗೂ ಮಾದರಿಯಾಗಿರಬೇಕು ಎಂದ ಅವರು ನೂತನ ಸಭಾಂಗಣದ ಪ್ರಯೋಜನ ಎಲ್ಲರಿಗೂ ಸಿಗಲಿ ಎಂದು ಶುಭ ಹಾರೈಸಿದರು.
ತಾ.ಪಂ.ಅಧ್ಯಕ್ಷ ಯಶವಂತ ದೇರಾಜೆ ಅಧ್ಯಕ್ಷತೆ ವಹಿಸಿ ಮಾತನಾಡಿ ಸರ್ಕಾರ ಹಾಗೂ ದಾನಿಗಳ ನೆರವಿನಿಂದ ಇಷ್ಟೊಂದು ಸುಂದರವಾದ ಸಭಾಂಗಣ ನಿರ್ಮಸುವಲ್ಲಿ ವಿಶೇಷ ಮುತುವರ್ಜಿ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಾರ್ಯವನ್ನು ಶ್ಲಾಘಿಸಿದರು. ಪುರಸಭಾಧ್ಯಕ್ಷೆ ವಸಂತಿ ಸಿ., ತಾ.ಪಂ.ಉಪಾಧ್ಯಕ್ಷೆ ವಿಲಾಸಿನಿ ಶುಭಹಾರೈಸಿದರು. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಐಡಾ ಸುರೇಶ್, ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾ.ಪಂ.ಸದಸ್ಯರಾದ ದಿನೇಶ್ ಅಮ್ಟೂರು, ಆನಂದ ಶಂಭೂರು, ಕಾರ್ಯನಿರ್ವಹಣಧಿಕಾರಿ ಸಿಪ್ರಿಯಾನ್ ಮಿರಾಂಡ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ ಸ್ವಾಗತಿಸಿ, ಪ್ರಸ್ತಾವಿಸಿದರು. ಸಮನ್ವಯಾಧಿಕಾರಿ ರಾಜೇಶ್ ವಂದಿಸಿದರು. ಶಿಕ್ಷಕ ಬಿ.ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.
1 (2)

2

By suddi9

Leave a Reply

Your email address will not be published. Required fields are marked *