ಬಂಟ್ವಾಳ; ಫೆಬ್ರವರಿ ತಿಂಗಳ ಮೊದಲವಾರದಲ್ಲಿ ಬಿ.ಸಿ.ರೋಡಿನಲ್ಲಿ ಪುಸ್ತಕ ಮೇಳ ಹಮ್ಮಿಕೊಳ್ಳಲು ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ತೀ ನಿಸಿದೆ. ಸಂಘದ ಅಧ್ಯಕ್ಷ ಮೌನೇಶ ವಿಶ್ವಕರ್ಮ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ನಡೆದ ಸಂಘದ ಸಬೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
pressclub
ತಾಲೂಕಿನ ಪುಸ್ತಕ ಪ್ರೇಮಿಗಳನ್ನು, ಶಿಕ್ಷಕರನ್ನು, ಉಪನ್ಯಾಸಕರನ್ನು ಶಾಲಾಕಾಲೇಜು ವಿದ್ಯಾರ್ಥಿಗಳನ್ನು ಕೇಂದ್ರೀಕರಿಸಿಕೊಂಡು ನಡೆಯುವ ಈ ಪುಸ್ತಕ ಮೇಳದಲ್ಲಿ ಪ್ರತಿಷ್ಠಿತ ಪ್ರಕಾಶನ ಸಂಸ್ಥೆಗಳು ಹಾಗೂ ಪುಸ್ತಕ ಮಾರಾಟಗಾರರು ಭಾಗವಹಿಸಲು ವ್ಯವಸ್ಥೆ ಕಲ್ಪಿಸುವುದು, ಇದೇ ಮೊದಲಬಾರಿಗೆ ತಾಲೂಕಿನಲ್ಲಿ ಪುಸ್ತಕ ಮೇಳ ಹಮ್ಮಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪುಸ್ತಕ ಆಸಕ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹೆಚ್ಚಿನ ಪ್ರಚಾರ ಒದಗಿಸುವುದು ಮೊದಲಾದ ವಿಷಯಗಳ ಕುರಿತಾಗಿ ಸದಸ್ಯರು ಸಲಹೆ ಸೂಚನೆ ನೀಡಿದರು. ಪುಸ್ತಕ ಮೇಳಕ್ಕೆ ಪೂರಕವಾಗಿ ಕನರ್ಾಟಕ ಪುಸ್ತಕ ಪ್ರಾಧಿಕಾರ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಸಹಯೋಗವನ್ನು ಕೋರುವುದೆಂದು ಸಭೆ ತೀರ್ಮಾನಿಸಿತು.

ರಾಜ್ಯ ಸಂಘದ ಸದಸ್ಯತ್ವಕ್ಕೆ ಅಜರ್ಿ ಸಲ್ಲಿಕೆಯ ಬಗ್ಗೆ ಜಿಲ್ಲಾ ಸಂಘದ ಕಾರ್ಯದರ್ಶಿ ವೆಂಕಟೇಶ್ ಬಂಟ್ವಾಳ ಮಾಹಿತಿ ನೀಡಿದರು. ಪ್ರೆಸ್ಕ್ಲಬ್ ಕಾರ್ಯನಿರ್ವಹಣೆ ಬಗ್ಗೆ ಪ್ರೆಸ್ ಕ್ಲಬ್ ಕಾರ್ಯದರ್ಶಿ ಚಂದ್ರಶೇಖರ ಕಲ್ಮಲೆ ವಿವರ ನೀಡಿದರು. ಸಂಘದ ಕಾರ್ಯ ಚಟುವಟಿಕೆ ಬಗ್ಗೆ ಸಂಘದ ಪ್ರಧಾನ ಕಾರ್ಯದಶರ್ಿ ರತ್ನದೇವ್ ಪೂಂಜಾಲಕಟ್ಟೆ ವರದಿ ವಾಚಿಸಿದರು. ಸಂಘದ ಮುಂದಿನ ಕಾರ್ಯಚಟುವಟಿಕೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು. ಕೋಶಾಧಿಕಾರಿ ಸಂದೀಪ್ ಸಾಲ್ಯಾನ್ ಸ್ವಾಗತಿಸಿದರು. ಉಪಾಧ್ಯಕ್ಷ ಸೂರ್ಯನಾರಾಯಣ ಪೂವಳ ವಂದಿಸಿದರು.

By suddi9

Leave a Reply

Your email address will not be published. Required fields are marked *