ಮೂಡುಬಿದಿರೆ: ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ 5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ರಾಜ್ಯದ 7ನೇ, ಅವಿಭಜಿತ ದ.ಕ ಜಿಲ್ಲೆಯ ಮೂರನೇ 400ಮೀ. ಸಿಂಥೆಟಿಕ್ ಟ್ರ್ಯಾಕ್ನ್ನು ರಾಜ್ಯ ಅರಣ್ಯ ಮತ್ತು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಅರಣ್ಯ ಬಿ.ರಮಾನಾಥ ರೈ ಗುರುವಾರ ಸಂಜೆ ಲೋಕಾರ್ಪಣೆಗೊಳಿಸಿದರು.

mbd_jan15_7
ನಂತರ ಮಾತನಾಡಿದ ಅವರು ಕರ್ನಾಟಕ ಸರ್ಕಾರ ಕ್ರೀಡೆಗೆ ಹೆಚ್ಚಿನ ಮಹತ್ವ ನೀಡುತ್ತಿದೆ. ದ.ಕ ಜಿಲ್ಲೆಯು ಅನೇಕ ಕ್ರೀಡಾಪಟುಗಳನ್ನು ರಾಷ್ಟ್ರಕ್ಕೆ ನೀಡಿದೆ. ಈಗ ಮೂಡುಬಿದಿರೆಯಲ್ಲೂ ರಾಷ್ಟ್ರಮಟ್ಟದ ಸಾಧನೆ ಮಾಡುವ ಕ್ರೀಡಾಪಟುಗಳು ರೂಪುಗೊಳ್ಳುತ್ತಿದ್ದು, ಈ ಸಿಂಥೆಟಿಕ್ ಟ್ರ್ಯಾಕ್ ಕ್ರೀಡಾಪಟುಗಳ ಸಾಧನೆಗೆ ಪೂರಕವಾಗಿದೆ ಎಂದರು.

ಸಾಮರಸ್ಯದ ಊರು ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ ಎನ್ನುವುದಕ್ಕೆ ಮೂಡುಬಿದಿರೆಯೇ ಸಾಕ್ಷಿ. ತಾಲೂಕು ಕೇಂದ್ರವಾಗುವ ಅರ್ಹತೆಯಿರುವ ಮೂಡುಬಿದಿರೆ ಹೋಬಳಿಯಲ್ಲಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ನಡೆಯುತ್ತಿದ್ದು ಅಭಿವೃದ್ಧಿಗೆ ಪೂರಕವಾಗಿದೆ ಎಂದು ಹೇಳಿದ ಅವರು ಮುಂದಿನ ದಿನಗಳಲಿ ಅರಣ್ಯ ಇಲಾಖೆಯಲ್ಲಿ ವಿವಿಧ ಕ್ರೀಡೆಗಳಿಗೆ ಸಂಬಂಧಿಸಿದ ತಂಡಗಳನ್ನು ರಚಿಸುವ ಚಿಂತನೆ ನಡೆಸಿದ್ದು, ಅದನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವುದಾಗಿ ಹೇಳಿದರು.

ರಾಜ್ಯ ಯುವಜನ ಸೇವೆ ಸಚಿವ ಕೆ.ಅಭಯಚಂದ್ರ ಜೈನ್ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಡಾ.ಆಳ್ವರ ಕ್ರೀಡಾ ಸ್ಪೂರ್ತಿಯಿಂದಾಗಿ ಈ ಟ್ರ್ಯಾಕ್ ಮಾಡಲು ಸಾಧ್ಯವಾಗಿದೆ. ಇದು ಕೇವಲ ಆಳ್ವರ ಕಾಲೇಜಿನ ಕ್ರೀಡಾಪಟುಗಳಿಗೆ ಮಾತ್ರ ಕ್ರೀಡಾಂಗಣವಲ್ಲ ಮೂಡುಬಿದಿರೆ ಹೋಬಳಿಯ ಎಲ್ಲಾ ಕ್ರೀಡಾಪಟುಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಹೇಳಿದರು.

ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಮುಖ್ಯ ಅತಿಥಿಯಾಗಿ ಮಾತನಾಡಿ, ಕ್ರೀಡಾಪಟುಗಳಿಗೆ ಮೂಲಭೂತ ಸೌಲಭ್ಯಗಳನ್ನು ನೀಡುವ ಮೂಲಕ ಪ್ರೋತ್ಸಾಹ ನೀಡಿದರೆ ಉತ್ತಮ ಸಾಧನೆ ಮಾಡಲು ಸಾಧ್ಯ. ಪಂಜಾಬ್, ಹರಿಯಾಣದಂತಹ ಶ್ರೇಷ್ಠ ಕ್ರೀಡಾಪಟುಗಳ ಸಾಲಿಗೆ ಕರ್ನಾಟಕದ ಕ್ರೀಡಾಪಟುಗಳು ಬರಲು ಪೂರಕವಾದ ಪ್ರೋತ್ಸಾಹ ನೀಡಬೇಕು ಎಂದರು.

ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ಬ್ಲೋಸಂ ಆಸ್ಕರ್ ಫೆರ್ನಾಂಡಿಸ್, ವಿಧಾನಪರಿಷತ್ ಸದಸ್ಯರಾದ ಕ್ಯಾ.ಗಣೇಶ್ ಕಾರ್ಣಿಕ್, ಐವನ್.ಡಿ’ಸೋಜಾ, ದ.ಕ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ, ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ, ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಜಂಟಿ ನಿರ್ದೇ ಶಕ ಜೀತೇಂದ್ರ, ಉಪನಿರ್ದೇಶಕ ಪಾಂಡುರಂಗ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ಮೂಡುಬಿದರೆ ಪುರಸಭಾ ಅಧ್ಯಕ್ಷೆ ಸುಪ್ರಿಯಾ.ಡಿ.ಶೆಟ್ಟಿ. ಚೌಟರ ಅರಮನೆಯ ಕುಲದೀಪ್.ಎಂ, ಮೈಟ್ ಕಾಲೇಜು ಅಧ್ಯಕ್ಷ ರಾಜೇಶ್ ಚೌಟ, ಮೂಡುಬಿದಿರೆ ರೋಟರಿ ಕ್ಲಬ್ ಅಧ್ಯಕ್ಷ ಮುರಳಿಕೃಷ್ಣ, ಡಿ.ಜೆ.ವಿ.ವಿ ಸಂಘದ ಕಾರ್ಯದರ್ಶಿ ಅಭಿಜಿತ್.ಎಂ ಉಪಸ್ಥಿತರಿದ್ದರು.
ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *