ಮಂಜೇಶ್ವರ: ಬಂದ್ಯೋಡು ಸಮೀಪದ ಮುಟ್ಟಂ ಬಳಿ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.
ಮೃತರನ್ನು ಬಂದ್ಯೋಡು ಅಡ್ಕದ ಬಿ.ಎಂ ಮೊಯ್ದೀನ್ ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಮುಟ್ಟಂ ಗೇಟ್ ಬಳಿ ಇವರು ಸಂಚರಿಸುತ್ತಿದ್ದ ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಡಿಕ್ಕಿಯಿಂದ ಗಂಭೀರ ಗಾಯಗೊಂಡ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ ವೇಳೆ ಮೃತ್ಯು ಸಂಭವಿಸಿದೆ.
