ಬಂಟ್ವಾಳ:ತಾಲ್ಲೂಕಿನ ಬಿ.ಸಿ.ರೋಡ್ ಎಲ್ಲೈಸಿ ಶಾಖೆಯ ಅಭಿವೃದ್ಧಿ ಅಧಿಕಾರಿ ಮಧ್ವರಾಜ್ ಕಲ್ಮಾಡಿ ಪ್ರತಿನಿಧಿ ಬಳಗ ವತಿಯಿಂದ ಇದೇ 21ರಂದು ಮಧ್ಯಾಹ್ನ ಬಿ.ಸಿ.ರೋಡ್ನ ಎಲ್ಲೈಸಿ ಶಾಖೆ ಸಭಾಂಗಣದಲ್ಲಿ ವಾರ್ಷಿಕೋತ್ಸವ ಮತ್ತು ಮಹಾಸಭೆ ನಡೆಯಲಿದೆ.

ಎಲ್ಲೈಸಿ ಶಾಖಾಧಿಕಾರಿ ಸಿ.ಚಂದ್ರು, ಆಡಳಿತಾಧಿಕಾರಿ ಗೋಪಾಲಕೃಷ್ಣ ಭಟ್, ಕುಶಾಲನಗರ ಶಾಖಾಧಿಕಾರಿ ಆರ್.ಕೆ.ಹೆಗ್ಡೆ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ಅಂದು ಬೆಳಿಗ್ಗೆ ಸಾಮೂಹಿಕ ಸತ್ಯನಾರಾಯಣ ಪೂಜೆ, ಸಾಧಕರಿಗೆ ಸನ್ಮಾನ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಸಂಚಾಲಕ ದಿನಕರ ಮುಡಿಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
–
—