ಬಂಟ್ವಾಳ: ಸಹಾಯಕ ಆಯುಕ್ತ ಡಾ. ಅಶೋಕ್ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳ ತಂಡ ಕಾರ್ಯಚರಣೆ ನಡೆಸಿ 36 ಲಾರಿಗಳನ್ನು ವಶಕ್ಕೆ ಪಡೆದು ಪೊಲಿಸರಿಗೆ ಹಸ್ತಾಂತರಿಸಿದೆ.
DSC_5324

DSC_5323
ಸಜೀಪಮುನ್ನೂರು ಗ್ರಾಮದ ಮಂಜಲ್ಪಾದೆಗೆ ದಾಳಿ ನಡೆಸಿ 12 ಲಾರಿಗಳನ್ನು ಕಂದಾಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬಿ.ಸಿ.ರೋಡು ಜಂಕ್ಷನ್ನಲ್ಲಿ ಕಾರ್ಯಚರಣೆ ನಡೆಸಿದ ಅಧಿಕಾರಿಗಳು ನಿಗದಿತ ತೂಕಕ್ಕಿಂತ ಅಧಿಕ ಮರಳು ಸಾಗಾಟ ಮಾಡುತ್ತಿದ್ದ 24 ಲಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದಾಳಿ ಕಾರ್ಯಚರಣೆಯಲ್ಲಿ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ, ಕಂದಾಯ ನಿರೀಕ್ಷಕ ನಾರಾಯಣ ಪೂಜಾರಿ, ಗ್ರಾಮಕರಣಿಕ ತೌಸೀಪ್ ಹಾಜರಿದ್ದರು.

By suddi9

Leave a Reply

Your email address will not be published. Required fields are marked *