ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಡಗಬೆಳ್ಳೂರು ಗ್ರಾಮ ಪಂಚಾಯಿತಿನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕಾಮಗಾರಿಗಳಲ್ಲಿ ಅನುದಾನ ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಿ ಇಲ್ಲಿನ ಪಿಡಿಒ ಮತ್ತು ಸಿಬ್ಬಂದಿಗಳ ವಿರುದ್ಧ ದೂರು ಸಲ್ಲಿಸಿದ ಘಟನೆ ನಡೆದಿದೆ.
ಬಸವ ವಸತಿ ಯೋಜನೆ, ಇಂದಿರಾ ಆವಾಸ್ ಯೋಜನೆ, ಶೌಚಾಲಯ ನಿರ್ಮಾಣ ಹೀಗೆ ಒಟ್ಟು ರೂ 5ಲಕ್ಷಕ್ಕೂ ಮಿಕ್ಕಿ ಮೊತ್ತದ ಅವ್ಯವಹಾರವಾಗಿದೆ ಎಂದು ಆರೋಪಿಸಲಾಗಿದೆ.
ಈ ನಡುವೆ ಇಲ್ಲಿನ ಪಿಡಿಒ ಮತ್ತು ಕೆಲವೊಂದು ಸಿಬ್ಬಂದಿಗಳು ರಾಜೀನಾಮೆ ನೀಡುವ ಬಗ್ಗೆ ನಾಟಕವಾಡುತ್ತಿದ್ದಾರೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯಾನ್ ಮಿರಾಂದ ಇವರಿಗೆ ನೀಡಿರುವ ದೂರಿನಲ್ಲಿ ವಿವರಿಸಿದ್ದಾರೆ.

By suddi9

Leave a Reply

Your email address will not be published. Required fields are marked *