ಬಂಟ್ವಾಳ:ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ವಿಜಯವನ್ನು ತಂದುಕೊಟ್ಟ ಕಾರ್ಯಕರ್ತರು ಹಾಗೂ ನೂತನ ಸದಸ್ಯರಿಗೆ ಅಭಿನಂದನಾ ಸಮಾರಂಭವು ಜೂನ್ 14ರಂದು ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಕ್ಷೇತ್ರ ಸಮಿತಿ ಅಧ್ಯಕ್ಷ ಜಿ.ಆನಂದ ತಿಳಿಸಿದ್ದಾರೆ. ಗುರುವಾರ ಬಿ.ಸಿ.ರೋಡಿನ ಪ್ರೆಸ್ಕ್ಲಬ್ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಷ್ಟ್ರೀಯ ಬಿಜೆಪಿ ಉಪಾಧ್ಯಕ್ಷ, ಸಂಸದ ಬಿ.ಎಸ್ ಯಡಿಯೂರಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಸಂಸದೆ ಶೋಭಾ ಕರಂದ್ಲಾಜೆ ಸಹಿತ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
20150611_163606-1

ಇದೇ ವೇಳೆ ನೂತನ ಸದಸ್ಯರಿಗೆ ತಮ್ಮ ಕಾರ್ಯಚಟುವಟಿಕೆ ಮತ್ತು ಪಂಚಾಯತ್ ರಾಜ್ ವ್ಯವಸ್ಥೆಯ ಕುರಿತಂತೆ ವಿ.ಪ.ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿಯವರು ಮಾಹಿತಿ ನೀಡಲಿದ್ದಾರೆ. ಹಾಗೆಯೆ ಬಿಜೆಪಿ ಬೆಂಬಲಿತ ಸದಸ್ಯರುಗಳಿಗೆ ಪಕ್ಷದ ವತಿಯಿಂದ ಗುರುತಿನ ಚೀಟನ್ನು ಕೂಡಾ ವಿತರಿಸಲಾಗುವುದೆಂದು ತಿಳಿಸಿದರು. ಬಂಟ್ವಾಳ ವಿಧಾನ ಸಭಾ ಕ್ಷೇತ್ರದ 39ಗ್ರಾಮ ಪಂಚಾಯತ್ ನಲ್ಲಿ 22ಗ್ರಾಮ ಪಂಚಾಯತ್ನ್ನು ಬಿಜೆಪಿ ಬೆಂಬಲಿತರು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಜಿಲ್ಲಾ ಉಸ್ತುವಾರಿ ಸಚಿವರ ಸ್ವ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಲು ಕಾರ್ಯಕರ್ತರ ಶ್ರಮ ಅಪಾರವಾಗಿದೆ ಎಂದ ಅವರು ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ಹಣದ ಹೊಳೆಯನ್ನೇ ಹೊರಿಸಿದ್ದರೂ ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ ಬಿಜೆಪಿಯನ್ನು ಬೆಂಬಲಿಸಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ನ ಜನವಿರೋಧಿ ನೀತಿಯ ಬಗ್ಗೆ ಆಕ್ರೋಶಿತ ಜನರು ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಮುಂದಿನ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗೂ ಈಗಿಂದೀಗಲೆ ತಯಾರಿ ನಡೆಸುವ ನಿಟ್ಟಿನಲ್ಲಿ ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಹಾಗೆಯೆ ಕೇಂದ್ರ ಸರಕಾರದ ಜನಪರ ಯೋಜನೆಯನ್ನು ಜನಸಾಮಾನ್ಯರಿಗೆ ತಲುಪಿಸುವ ದೆಸೆಯಲ್ಲಿ ನೂತನ ಸದಸ್ಯರಿಗೆ ಮಾಹಿತಿಯನ್ನು ನೀಡಲಾಗುವುದು ಎಂದು ಸುದ್ದಿ ಗೋಷ್ಟಿಯಲ್ಲಿ ಹಾಜರಿದ್ದ ಮಾಜಿ ಶಾಸಕ ರುಕ್ಮಯ ಪೂಜಾರಿ ವಿವರಿಸಿದರು.
ಬಿ.ಸಿ.ರೋಡಿನ ಸರ್ವೇಸ್ ರಸ್ತೆ ಹದಗೆಡಲು ಇಲಾಖೆಗಳ ನಡುವಿನ ಸಮನ್ವಯದ ಕೊರತೆಯೇ ಕಾರಣ ಇದಕ್ಕೆ ಜಿಲ್ಲಾಧಿಕಾರಿಯವರು ಕೂಡಾ ಗಮನ ಹರಿಸಿವ ಅಗತ್ಯವಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಈ ಕುರಿತಾಗಿ ಅಧಿಕಾರಿಗಳ ಸಭೆ ನಡೆಸಿ ಒತ್ತಡವನ್ನು ಹೇರಿದ್ದಾರೆ. ಅಧಿಕಾರಿಗಳು ಇದೇ ರೀತಿ ನಿರ್ಲಕ್ಷ್ಯ ತೋರಿದಲ್ಲಿ ಪ್ರತಿಭಟನೆ ಅನಿವಾರ್ಯ ಆದೀತೆಂದು ಅವರು ಎಚ್ಚರಿಸಿದ್ದಾರೆ.

ಸಂಸದರಿಗೆ ಸನ್ಮಾನ ಅಭಿವೃದ್ದಿ ಕಾರ್ಯದಲ್ಲಿ ದೇಶದಲ್ಲೇ 2ನೇ ಸ್ಥಾನ ಹಾಗೂ ರಾಜ್ಯದಲ್ಲಿ ನಂಬರ್ 1 ಸ್ಥಾನ ಪಡೆದಿರುವ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಸಾದನೆ ಪಕ್ಷ ಮತ್ತು ಇಡೀ ಕ್ಷೇತ್ರಕ್ಕೆ ಹೆಮ್ಮೆ ತಂದಿದೆ. ಅವರಿಗೆ ಕೆಲಸ ಮಾಡಲು ಇನ್ನಷ್ಟು ಸ್ಪೂರ್ತಿ ನೀಡುವ ನಿಟ್ಟಿನಲ್ಲಿ ಬಂಟ್ವಾಳ ಕ್ಷೇತ್ರದ ವತಿಯಿಂದ ಸನ್ಮಾನಿಸಲಾಗುತ್ತಿದೆ. ಹಾಗೆಯೆ ಜೂನ್ 18ರಂದು ಮಂಗಳೂರಿನಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಲಿದೆಯೆಂದು ರುಕ್ಮಯ ಪೂಜಾರಿ ತಿಳಿಸಿದ್ದಾರೆ.
ಸುದ್ದಿ ಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಉಳಿಪಾಡಿಗುತ್ತು ರಾಜೇಶ್ ನಾಯಕ್ , ದಿನೇಶ್ ಭಂಡಾರಿ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *