ಸುದ್ದಿ9 ಕೈಕಂಬ: ಇಸ್ಲಾಮಿಕ್ ಅಕಾಡೆಮಿ ಆಫ್ ಎಜುಕೇಶನ್, ಯೇನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ ಆಶ್ರಯದಲ್ಲಿ ಗಂಜಿಮಠ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಕೈಕಂಬ ದಿಶಾ ಟ್ರಸ್ಟ್ ಸಹಕಾರದೊಂದಿಗೆ ಉಚಿತ ನೇತ್ರ ತಪಾಸಣೆ ಶಿಬಿರ ಕೈಕಂಬ ದಿಶಾ ಟ್ರಸ್ಟ್ ಕಚೇರಿಯಲ್ಲಿ ನಡೆಯಿತು.
ಗಂಜಿಮಠ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಧಿಕಾರಿ ಚೇತನ್‍ರಾಜ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಹಳ್ಳಿ ಪ್ರದೇಶದ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವಲ್ಲಿ ಸಂಘ ಸಂಸ್ಥೆಗಳು ಸಹಕಾರ ಅಗತ್ಯವಾಗಿ ಆರೋಗ್ಯ ಇಲಾಖೆಗೆ ಬಹಳ ಅಗತ್ಯವಾಗಿ ಬೇಕು ಎಂದರು.ದಿಶಾ ಸಂಸ್ಥೆಯ ನಿರ್ದೇಶಕರಾದ ಸಿಲ್ವೆಸ್ಟರ್ ಡಿ ಸೋಜ ಸಭಾಧ್ಯಕ್ಷತೆ ವಹಿಸಿ ಮಾತನಾಡಿ ಸಮಾಜಮುಖಿ ಕಾರ್ಯಗಳಿಗೆ ಎಲ್ಲರ ಸಹಕಾರ ಅಗತ್ಯ ಎಂದರು. ಯೆನೆಪೋಯ ಆಸ್ಪತ್ರೆಯ ಡಾ/ ಅಲ್ಮಾಸ್, ದಿಶಾ ಸಂಸ್ಥೆಯ ಸಂಯೋಜಕರಾದ ಹೆನ್ರಿವಾಲ್ಡರ್ , ಗಂಜಿಮಠ ಆರೋಗ್ಯ ಕೇಂದ್ರದ ಸಿಬ್ಬಂದ್ದಿವರ್ಗ ಹಾಗೂ ದಿಶಾ ಸಂಸ್ಥೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ದಿಶಾ ಸಂಸ್ಥೆಯ ಕ್ಷೇತ್ರ ಸಂಯೋಜಕ ರುದೇಶ್ ಕಾರ್ಯಕ್ರಮ ನಿರೂಪಿಸಿ ಕಾರ್ಯಕರ್ತೆ ಶ್ರೀಮತಿ ರಂಜಿನಿ ಸ್ವಾಗತಿಸಿದರು.ನಂತರ ನಾರ್ವಜನಿಕ ಉಚಿತ ಕಣ್ಣಿನ ತಪಾಸಣೆ ನಡೆಯಿತು. 85 ಜನರು ಶಿಬಿರದ ಪ್ರಯೋಜನ ಪಡೆದರು.
