ಕಡತ ಪರಿಶೀಲನೆ
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಸಜಿಪಮುನ್ನೂರು ಗ್ರಾಮ ಪಂಚಾಯಿತಿನಲ್ಲಿ ನಾಗರಿಕರಿಗೆ ಮನೆ ಮತ್ತು ಕಟ್ಟಡ ನಿರ್ಮಿಸಲು ಪರವಾನಿಗೆ ನೀಡುವ ವೇಳೆ ದುಪ್ಪಟ್ಟು ಹಣ ವಸೂಲಿ ಮಾಡಲಾಗುತ್ತಿದೆ. ರಸ್ತೆ ಮತ್ತಿತರ ಕಾಮಗಾರಿ ಗುತ್ತಿಗೆಯಲ್ಲಿ ಅವ್ಯವಹಾರವಾಗುತ್ತಿದೆ ಎಂಬ ನಾಗರಿಕರ ದೂರಿನ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಲೋಕಾಯುಕ್ತರು ದಿಢೀರ್ ದಾಳಿ ನಡೆಸಿ ಕಡತ ಪರಿಶೀಲನೆ ನಡೆಸಿದ ಘಟನೆ ನಡೆದಿದೆ. ಮಂಗಳೂರು ಲೋಕಾಯುಕ್ತ ವಿಭಾಗದ ಮೂವರು ಅಧಿಕಾರಿಗಳು ದಿಢೀರನೆ ಭೇಟಿ ನೀಡಿ ಇಲ್ಲಿನ ವಿವಿಧ ಕಡತಗನ್ನು ಪರಿಶೀಲನೆ ನಡೆಸಿದ್ದು, ಅವ್ಯವಹಾರ ನಡೆದಿರುವ ಬಗ್ಗೆ ಏನೂ ತಿಳಿಸಿಲ್ಲ ಎಂದು ಪಂಚಾಯಿತಿ ಮೂಲಗಳು ತಿಳಿಸಿವೆ.