ಬಂಟ್ವಾಳ: ಬಂಟ್ವಾಳ ತಾಲ್ಲೂಕಿನಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಮಹಾ ಸಂಪರ್ಕ ಅಭಿಯಾನ ಕಾರ್ಯಕ್ರಮವು ಮಣಿನಾಲ್ಕೂರು ಮತ್ತು ಸರಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಭಾನುವಾರ ನಡೆಯಿತು.

ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬಿ.ದೇವದಾಸ ಶೆಟ್ಟಿ, ಮಾಜಿ ಗ್ರಾ.ಪಂ. ಅಧ್ಯಕ್ಷ ಧನಂಜಯ ಶೆಟ್ಟಿ, ಬಿಜೆಪಿ ಸದಸ್ಯರಾದ ಪೂವಪ್ಪ ಕಡಮಜೆ, ಧರಣೇಂದ್ರ ಜೈನ್, ವಿಶ್ವನಾಥ ನಾಯ್ಕ, ಪವನ್ ಕುಮಾರ್ ಶೆಟ್ಟಿ ಮತ್ತಿತರರು ಇದ್ದರು.