ಬಂಟ್ವಾಳ: ಹಳ್ಳಿ-ಹಳ್ಳಿಗಳಲ್ಲಿ ಗ್ರಾಮ ಸ್ವರಾಜ್ಯದ ಪರಿಕಲ್ಪನೆ ಪರಿಪೂರ್ಣವಾಗಿ ಅನುಷ್ಠಾನಗೊಂಡಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ಅಬ್ದುಲ್ ನಜೀರ್ಸಾಬ್ ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ಜಿಲ್ಲಾ ಪಂಚಾಯತ್ ಮಂಗಳೂರು ಹಾಗೂ ತಾ.ಪಂ. ಬಂಟ್ವಾಳ ಇವರ ಆಶ್ರಯದಲ್ಲಿ ತಾ.ಪಂ. ಸಾಮಥ್ರ್ಯ ಸೌಧ ಬಂಟ್ವಾಳ ಇಲ್ಲಿ ನಡೆದ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಸಾಮಥ್ರ್ಯಾಭಿವೃದ್ಧಿ-ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸರಕಾರಿ ಯೋಜನೆಗಳು ಯಥಾವತ್ತಾಗಿ ಜನರಿಗೆ ತಲುಪುವಲ್ಲಿ ಪಂಚಾಯತ್ ಮಟ್ಟದ ಜನಪ್ರತಿನಿಧಿಗಳಿಗೆ ಹೆಚ್ಚಿನ ಜವಬ್ದಾರಿಯಿದೆ ಎಂದರು. ಕಾರ್ಯಕ್ರಮದಲ್ಲಿ ತಾ.ಪಂ. ಅಧ್ಯಕ್ಷ ಯಶವಂತ ದೇರಾಜೆ, ಸಂಪನ್ಮೂಲ ವ್ಯಕ್ತಿ ಮಹಮ್ಮದ್ ಬಡಗನ್ನೂರು ಉಪಸ್ಥಿತರಿದ್ದರು.
ಕಾರ್ಯನಿರ್ವಾಹಣಾಧಿಕಾರಿ ಸಿಪ್ರೀಯನ್ ಮಿರಾಂದ ಸ್ವಾಗತಿಸಿ,ವ್ಯವಸ್ಥಾಪಕ ನಾಗೇಶ್ ವಂದಿಸಿದರು. ಮಂಜು ವಿಟ್ಲ ಕಾರ್ಯಕ್ರಮ ನಿರ್ವಹಿಸಿದರು.