ಬಂಟ್ವಾಳ: ಶ್ರೀರಾಮ ಪ್ರಥಮ ದರ್ಜೆ ಮಹವಿದ್ಯಾಲಯದ ಕಲ್ಲಡ್ಕ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ವಿದ್ಯಾರ್ಥಿ ಸಂಘ ಮತ್ತು ಇತರ ಸಂಘಗಳ ವತಿಯಿಮದ 1000 ಗಿಡಗಳನ್ನು ನೆಡುವ ವಿನೂತನ ಸರನಿ ಕಾರ್ಯಕ್ರಮ “ಸಹಸ್ರ ವೃಕ್ಷಾರೋಪಣ” ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಲ್ಲಡ್ಕ ಸುಧೆಕ್ಕಾರ್‍ನ ಗುಡ್ಡದಲ್ಲಿ ವಿದ್ಯಾರ್ಥಿಗಳು ಗಿಡಗಳನ್ನು ನೆಟ್ಟರು.

ಕಾರ್ಯಕ್ರಮಕ್ಕೆ ಪ್ರಾಂಶುಪಾಲರು ಮಾರ್ಗದರ್ಶನ ನೀಡಿದರು. ರಾಷ್ಟ್ರೀಯ ಸೇವಾ ಯೋಜನೆಯ ಘಟಕಾಧಿಕಾರಿ ಉಪನ್ಯಾಸಕ ಹರೀಶ್ ಮತ್ತು ಉಪನ್ಯಾಸಕಿ ಶ್ರೀಮತಿ ರೇಖಾ ಹಾಗೂ ಇತರ ಉಪನ್ಯಾಸಕರು ಸಹಕರಿಸಿದರು.