ಬಂಟ್ವಾಳ ಬಿ.ಮೂಡ ಗ್ರಾಮದ ಇಬ್ರಾಹಿಂರವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಿಡುಗಡೆಯಾದ ರೂ.30,000 ಮೊತ್ತದ ಚೆಕ್ಕನ್ನು ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ಇವರು ಇತ್ತೀಚಿಗೆ ಸಚಿವರ ಬಂಟ್ವಾಳ ಕಛೇರಿಯಲ್ಲಿ ವಿತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಬೂಡ ಅಧ್ಯಕ್ಷ ಪಿಯೂಸ್ ಎಲ್ ರೊಡ್ರಿಗಸ್, ಬಂಟ್ವಾಳ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಐಡಾಸುರೇಶ್, ತಾಲೂಕು ಪಂಚಾಯತ್ ಸದಸ್ಯ ಪದ್ಮಶೇಖರ್ ಜೈನ್ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಅಬ್ಬಾಸ್ ಅಲಿ, ಬಂಟ್ವಾಳ ತಾಲೂಕು ತಹಶೀಲ್ದಾರ್ ಪುರಂದರ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.