ಮೂಡುಬಿದರೆ: ಪುರಸಭಾ ವ್ಯಾಪ್ತಿಯ ಗಂಟಾಲ್ಕಟ್ಟೆಯ ಹಾಡಿಯೊಂದರಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಕಟ್ಟಿ ಹಾಕಿದ್ದಾರೆ ಎಂದು ಹೇಳಲಾಗಿದ್ದು, ಗುರುವಾರ ಸಂಜೆ ಎರಡು ಸಮುದಾಯದಗಳ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ 25 ಮಂದಿಯನ್ನು ಪೊಲೀಸರು ಆರೋಪಿಗಳನ್ನಾಗಿ ಗುರುತಿಸಿರುವುದು ತಿಳಿದುಬಂದಿದೆ.
mbd_aug21_5 (1)
ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಮೂವರು ಮೂಡುಬಿದರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ 10 ಮಂದಿ ವಿರುದ್ಧ ದೂರು ನೀಡಿದ್ದರೆ ಮೂವರು ಮುಸ್ಲಿಮ್ ಯುವಕರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ 15 ಮಂದಿ ವಿರುದ್ಧ ಪ್ರತಿದೂರು ನೀಡಿದ್ದಾರೆ. ದೂರು ಪ್ರತಿದೂರುಗಳನ್ನು ಸ್ವೀಕರಿಸಿದ ಪೊಲೀಸರು ಈಗಾಗಲೇ ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಪರಿಸ್ಥಿತಿ ಶಾಂತ: ಗಂಟಾಲ್ ಕಟ್ಟೆಯಲ್ಲಿ ನಡೆದ ಗುಂಪು ಘರ್ಷಣೆಯಿಂದ ನಿನ್ನೆ ಸಂಜೆ ಉದ್ವಿಗ್ನತೆ ಉಂಟಾಗಿದ್ದರು ಶುಕ್ರವಾರ ಪರಿಸ್ಥಿತಿ ಶಾಂತವಾಗಿದೆ.
ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಮೂಡುಬಿದರೆ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಪ್ರಕರಣದ ಮುಂದಿನ ತನಿಖೆ ನಡೆಸುತ್ತಿದ್ದಾರೆ.

By suddi9

Leave a Reply

Your email address will not be published. Required fields are marked *