ಬಂಟ್ವಾಳ: ಸಮಾಜದ ಹಿತ ಕಾಯ್ದುಕೊಳ್ಳುವಲ್ಲಿ ಪತ್ರಕರ್ತರ ಪಾತ್ರ ಮಹತ್ತರವಾದುದು, ತಮ್ಮ ನಾನಾ ಸಂಕಷ್ಟದ ನಡುವೆಯೂ ಪತ್ರಕರ್ತರು ತೋರುವ ಸಾಮಾಜಿಕ ಕಳಕಳಿ ಅನನ್ಯವಾದುದು ಎಂದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
1 (1)

01 33 31 29 28 27 26 25 22 19 18 4 3 35
ಬಂಟ್ವಾಳ ಪತ್ರಕರ್ತರ ಸಂಘದ ರಜತವರ್ಷಾಚರಣೆ ಸಮಿತಿ , ಕಾರ್ಯನಿರತ ಪತ್ರಕರ್ತರ ಸಂಘ ಬಂಟ್ವಾಳ ತಾಲೂಕು ಹಾಗೂ ಪ್ರೆಸ್ ಕ್ಲಬ್ ಬಂಟ್ವಾಳ ಇದರ ಆಶ್ರಯದಲ್ಲಿ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ನಡೆದ ರಜತ ವರ್ಷಾಚರಣೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ರಜತ ಲಾಂಛನ ವನ್ನು ಬಿಡುಗಡೆ ಗೊಳಿಸಿ ಮಾತನಾಡಿದರು.
25 ವರ್ಷದ ಹಿಂದೆ ಸುದ್ದಿ ಸಂಗ್ರಹಿಸುವುದೇ ಪತ್ರಕರ್ತರಿಗೆ ಒಂದು ಸಮಸ್ಯೆಯಾಗಿತ್ತು, ಬಳಿಕದ ದಿನದಲ್ಲಿ ಕಳುಹಿಸುವುದು ಸಮಸ್ಯೆಯಾಗಿತ್ತು. ಆದರೆ ಇಂದು ವರದಿಗಾರ ಸುದ್ದಿಯ ಸಂಗ್ರಹಕ್ಕೆಹೋಗುವ ಮುನ್ನ ಸುದ್ದಿ-ಫೊಟೋ ವ್ಯಾಟ್ಸ್ಯಾಪ್ ಮೂಲಕ ಸುದ್ದಿ ಕಛೇರಿಗೆ ತಲುಪಿ ಹೊಸ ಸಮಸ್ಯೆ ಸೃಷ್ಟಿಯಾಗುತ್ತಿದೆ ಎಂದರು. ನಿರಂತರ ಜನಸ್ಪಂದನದ ಹಲವು ಕಾರ್ಯಕ್ರಮಗಳ ಮೂಲಕ ಜನಮೆಚ್ಚುಗೆ ಪಡೆದಿರುವ ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಸಂಭ್ರಮದಲ್ಲಿ ಹಮ್ಮಿಕೊಳ್ಳುವ ಎಲ್ಲಾ ಸಮಾಜಮುಖೀ ಕಾರ್ಯಕ್ರಮಗಳು ಯಶಸ್ವಿಯಾಗಿ ಮೂಡಿ ಬರಲಿ ಎಂದರು.
ಪತ್ರಕರ್ತರ ಸಂಘದ ರಜತವರ್ಷಾಚರಣೆ ಸಮಿತಿ ಗೌರವಾಧ್ಯಕ್ಷ ಪ್ರೊ.ಬಾಲಕೃಷ್ಣ ಗಟ್ಟಿ ಯವರ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ, ಸಂಘದ ಸ್ಥಾಪನೆ ಹಾಗೂ ಅದರ ಆಗಿನ ಅನಿವಾರ್ಯತೆ ಬಗ್ಗೆ ವಿವರಿಸಿದರು. 25 ವರ್ಷದ ಹಿಂದೆ ಬಂಟ್ವಾಳದ ಸ್ಥಿತಿಗತಿಯ ಬಗ್ಗೆ ಅವಲೋಕನ ನಡೆಸಿದ ಅವರು, ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘ ತಾನು ನಡೆದು ಬಂದ ಹೆಜ್ಜೆಗಳನ್ನು ರಜತ ವರ್ಷಾಚರಣೆಯೊಂದಿಗೆ ನೆನೆಪಿಸಿಕೊಳ್ಳುತ್ತಿರುವುದು ಶ್ಲಾಘನಾರ್ಹ ವಿಚಾರ ಎಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷ ಆಶಾ ತಿಮ್ಮಪ್ಪ ಗೌಡ, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಪುರಸಭಾ ಅಧ್ಯಕ್ಷೆ ವಸಂತಿ ಚಂದಪ್ಪ ಬಂಟ್ವಾಳ ನಗರ ಯೋಜನಾಪ್ರಾಧಿಕಾರದ ಅಧ್ಯಕ್ಷ ಪಿಯೂಸ್ ರೋಡ್ರಿಗಸ್ , ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ.ಎಸ್.ಮಹಮ್ಮದ್, ಚೆನ್ನಪ್ಪ ಕೋಟ್ಯಾನ್, ಸಂತೋಷ್ ಕುಮಾರ್ ರೈ ಮೊದಲಾದ ವರು ಮಾತನಾಡಿ ಶುಭ ಹಾರೈಸಿದರು. ಗ್ರಾಮೀಣ ಪತ್ರಕರ್ತರ ಸಂಘದ ಸ್ಥಾಪಕ ಸದಸ್ಯ ಡಿ.ಎಂ. ಕುಲಾಲ್ ಸಂಘದ ಸ್ಥಾಪನೆ ಹಾಗೂ ನಡೆದು ಬಂದ ಹಾದಿಯ ಬಗ್ಗೆ ವಿವರ ನೀಡಿದರು.
ರಜತವರ್ಷಾಚರಣಾ ಸಮಿತಿ ಅಧ್ಯಕ್ಷ ಇಬ್ರಾಹಿಂ ಅಡ್ಕಸ್ಥಳ, ಪ್ರೆಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಕಾ.ನಿ.ಪತ್ರಕರ್ತರ ಸಂಘದ ಪ್ರಧಾನಕಾರ್ಯದರ್ಶಿ ನಿಶಾಂತ್ ಬಿಲ್ಲಂಪದವು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಿತಿ ಸಂಚಾಲಕ ಹರೀಶ್ ಮಾಂಬಾಡಿ ಸ್ವಾಗತಿಸಿದರು. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ ವಿಶ್ವಕರ್ಮ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಿತಿ ಪ್ರಧಾನ ಕಾರ್ಯದರ್ಶಿ ಸಂದೀಪ್ ಸಾಲ್ಯಾನ್ ವಂದಿಸಿದರು. ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಗೋಪಾಲ ಅಂಚನ್ ಕಾರ್ಯಕ್ರಮ ನಿರ್ವಹಿಸಿದರು.

By suddi9

Leave a Reply

Your email address will not be published. Required fields are marked *