ಸ.ಪ.ಪೂ.ಕಾಲೇಜು ವಾಮದಪದವು ಇಲ್ಲಿನ ಎನ್.ಎಸ್.ಎಸ್ ಹಾಗೂ ಪ್ರೌಢಶಾಲಾ ವಿಬಾಗದ ವತಿಯಿಂದ ಜಂಟಿಯಾಗಿ ಆಟಿಡೊಂಜಿ ದಿನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಲದಪದವು ಅಕ್ಷರ ಪ್ರತಿಷ್ಠಾನ ಇದರ ಸ್ಥಾಪಕ ಸಂಚಾಲಕರಾದ ಶ್ರೀ ಗೋಪಾಲ ಅಂಚನ್ ಇವರು ಭಾಗವಹಿಸಿ ಆಟಿ ತಿಂಗಳ ವಿವಿಧ ಆಚರಣೆಗಳ ಮಹತ್ವವನ್ನು ತಿಳಿಸಿ ತುಳುನಾಡಿನ ಭಾಷೆ, ಆಚರಣೆಗಳನ್ನು ಉಳಿಸಿ ಬೆಳೆಸಬೇಕೆಂದು ಹೇಳಿದರು. ಕಾಲೇಜಿನ ಪ್ರಬಾರ ಪ್ರಾಂಶುಪಾಲರಾದ ಶ್ರೀ ಶ್ರೀಧರ ಹೆಚ್ ಜಿ ಇವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ವೇದಿಕೆಯಲ್ಲಿ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಶ್ರೀ ಅರುಣ್ ಕುಮಾರ್ ಇಂದ್ರ, ಉಪಪ್ರಾಂಶುಪಾಲರಾದ ಶ್ರೀ ರಾಘವೇಂದ್ರ ಬಲ್ಲಾಳ್ ಇವರು ಉಪಸ್ಥಿತರಿದ್ದರು. ಎನ್.ಎಸ್.ಎಸ್ ಯೋಜನಾಧಿಕಾರಿ ಶ್ರೀ ದಯಾನಂದ ಇವರು ಅತಿಥಿಗಳನ್ನು ಸ್ವಾಗತಿಸಿದರು. ಕುಮಾರಿ ಪ್ರತೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಪ್ರಯುಕ್ತ ವಿದ್ಯಾರ್ಥಿಗಳಿಂದ ಆಟಿ ತಿಂಗಳಿನ ವಿವಿಧ ತಿಂಡಿ ತಿನಿಸುಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.
