ಕೈಕಂಬ: ಅವರ್ ಲೇಡಿ ಆಫ್ ಪೊಂಪೈ ಆಂಗ್ಲ ಮಾಧ್ಯಮ ಶಾಲೆ ಕೈಕಂಬ ಇದರ ವಿಧ್ಯಾರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿಯ ಕಿರಿಯ,ಹಿರಿಯ ವಿಭಾಗಳಲ್ಲಿ 22 ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಹಾಗೂ ಪ್ರೌಢ ವಿಭಾಗದ ಹೋಬಳಿ ,ಮಟ್ಟದ ಸ್ಪರ್ದೆಯಲ್ಲಿ 8 ಪ್ರಥಮ ಸ್ಥಾನ ಪಡೆದಿದ್ದಾರೆ.
ಮಂಗಳೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಸ್ಪರ್ದೆಯಲ್ಲಿ ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಕಥೆ ಹೇಳವುದು, ಅರೇಬಿಕ್ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಕೊಂಕಣಿ ಕಂಠಪಾಠದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರೌಢ ವಿಭಾಗದಲ್ಲಿ ಸಂಸ್ಕ್ರತ ಭಾಷಣ, ಛದ್ಮವೇಷ, ಚರ್ಚಾ ಸ್ಪರ್ಧೆ ಮತ್ತು ಕ್ಲೇ ಮಾಡೆಲಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಸುಬ್ರಹ್ಮಣ್ಯದಲ್ಲಿ ನಡೆಯುವ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

By suddi9

Leave a Reply

Your email address will not be published. Required fields are marked *