ಬಂಟ್ವಾಳ: ಪರಿಪೂರ್ಣವಾದ ಆರೋಗ್ಯಕ್ಕೆ ಕ್ರೀಡೆ ಪೂರಕವಾಗಿದ್ದು,ಕ್ರೀಡೆಯೂ ಶಿಕ್ಷಣದ ಒಂದು ಭಾಗವಾಗಿದೆ, ಶಿಕ್ಷಣದ ಜೊತೆಗೆ ಕ್ರೀಡೆಗೂ ಹೆಚ್ಚಿನ ಪ್ರಾಶಸ್ತ್ಯ ಸಿಗಬೇಕು ಎಂದು ದ.ಕ.ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ತಿಮ್ಮಪ್ ಗೌಡ ಹೇಳಿದರು.
ಅವರು ದ.ಕ.ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯಿತಿ, ಉಪನಿರ್ದೇಶಕರ ಕಚೇರಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಕರ್ನಾಟಕ ಪ್ರೌಢ ಶಾಲೆ ಮಾಣಿ ಸಂಯುಕ್ತ ಆಶ್ರಯದಲ್ಲಿ ಮಾಣಿ ಕರ್ನಾಟಕ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ದ.ಕ.ಜಿಲ್ಲಾಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.

ಕ್ರೀಡಾಪಟುಗಳು ಪ್ರತೀ ಪಂದ್ಯಾಟಗಳಲ್ಲೂ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳುವುದರ ಜೊತೆಯಲ್ಲಿ ಕ್ರೀಡಾ ಸ್ಪೂರ್ತಿ ಮೆರೆಯಬೇಕು ಎಂದ ಅವರು ಕಬಡ್ಡಿ ನಮ್ಮ ಮಣ್ಣಿನ ಕ್ರೀಡೆಯಾಗಿದ್ದು, ನಮಗೂ ಕಬಡ್ಡಿಗೂ ಬಹಳ ಹಿಂದಿನಿಂದಲೂ ಅವಿನಾಭಾವ ಸಂಬಧವಿದೆ ಎಂದರು.
ತಾಲ್ಲೂಕು ಪಂಚಾಯತ್ ಅಧ್ಯಕ್ಷ ಯಶವಂತ ದೇರಾಜೆ ಮಾತನಾಡಿ, ಕ್ರೀಡೆಯ ಮೂಲಕ ಕ್ರಿಯಾಶೀಲ ಹಾಗೂ ಉತ್ಸಾಹ ಭರಿತ ಜೀವನ ಸಾಧ್ಯ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದರ್ಶನದ ಸಿಕ್ಕಾಗ ಅಪ್ರತಿಮ ಕ್ರೀಡಾಪಟುಗಳಾಗಿ ಮೂಡಿಬರಲು ಸಾಧ್ಯ ಎಂದರು. ಜಿಲ್ಲಾ ಪಂಚಾಯಿತಿ ಸದಸ್ಯ ಚೆನ್ನಪ್ಪ ಕೋಟ್ಯಾನ್ ಮಾತನಾಡಿ, ಮಾನಸಿಕ ಹಾಗೂ ದೈಹಿಕ ಸಧೃಡತೆಗೆ ಕಬಡ್ಡಿ ಆಟ ಹೆಚ್ಚು ಸಹಕಾರಿ ಎಂದರು. ಮಾಣಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಮತಾ ಎಸ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ತಾಲೂಕು ಪಂಚಾಯತ್ ಸದಸ್ಯ ದಿನೇಶ್ ಅಮ್ಟೂರು,ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಕೇಶವ ಶುಭ ಹಾರೈಸಿದರು. ದ.ಕ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಚಂದ್ರಕಲಾ, ತಾಲ್ಲೂಕು ಪಂಚಾಯಿತಿ ಸದಸ್ಯ ಶಕುಂತಲಾ ಕುಲಾಲ್, ಕರ್ನಾಟಕ ಪ್ರೌಢಶಾಲಾ ಸಂಚಾಲಕ ಹಾಜಿ.ಕೆ.ಅಬ್ದುಲ್ ಖಾದರ್, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ,ದೈಹಿಕ ಶಿಕ್ಷಣ ಪರಿವೀಕ್ಷಕ ಗುರುನಾಥ ಬಾಗೇವಾಡಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಹೆಚ್.ನಾಯ್ಕ್, ಮಾಣಿಕರ್ನಾಟಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರವೀಂದ್ರ ಶೆಟ್ಟಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಗುರುಪ್ರಸಾದ್ ಬಲ್ಯ, ಪೆರಾಜೆ ಗ್ರಾ.ಪಂ.ಅಧ್ಯಕ್ಷೆ ಪುಷ್ಪ, ಮಾಣಿ ಗ್ರಾ.ಪಂ.ಉಪಾಧ್ಯಕ್ಷೆ ಸಂಪಾವತಿ, ಮಾಜಿ ಅಧ್ಯಕ್ಷೆ ರಮಣಿ, ರಾಮಚಂದ್ರ ಆಚಾರ್ಯ, ತಾಲೂಕು ದೈಹಿಕ ಶೀಕ್ಷಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಅಡ್ಯಂತಾಯ, ಶಾಲಾ ಆಡಳಿತ ಮಂಡಳಿ ಸದಸ್ಯ ಇಬ್ರಾಹಿಂ ಕೆ ಮಾಣಿ, ಬಾಲಕೃಷ್ಣ ಶೆಟ್ಟಿ ಕೊಡಾಜೆ, ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಗಂಗಾಧರ್ ರೈ ಉಪಸ್ಥಿತರಿದ್ದರು. ಇದೇ ಸಂದರ್ಭ ಉಳ್ಳಾಲ ಭಾರತ್ ಪ್ರೌಢಶಾಲಾ ಶಿಕ್ಷಕ ತುಕಾರಾಮ ರವರನ್ನು ಸನ್ಮಾನಿಸಲಾಯಿತು.
ಮಾಣಿ ವಿದ್ಯಾಭಿವರ್ಧಕ ಸಂಘದ ಕಾರ್ಯದರ್ಶಿ ಕಿರಣ್ ಹೆಗ್ಡೆ ಸ್ವಾಗತಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರ್ವಹಿಸಿದರು. ಪ್ರೌಢ ಶಾಲಾ ಮುಖ್ಯ ಶಿಕ್ಷಕ ಬಿ.ಕೆ ಭಂಡಾರಿ ವಂದಿಸಿದರು. ಜಿಲ್ಲೆಯ 7 ತಾಲೂಕುಗಳ 28 ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದವು.

