ಬಂಟ್ವಾಳ:ತಾಲ್ಲೂಕಿನ ರಾಯಿ-ಕೊಯಿಲ-ಅರಳ ಹಿಂದೂ ಧರ್ಮೋತ್ಥಾನ ವೇದಿಕೆ ಮತ್ತು ಶಾರದೋತ್ಸವ ಸಮಿತಿ ವತಿಯಿಂದ ಇದೇ 21ರಿಂದ 22ರತನಕ ಇಲ್ಲಿನ ಕೊಯಿಲ ಮಾವಂತೂರು ಶ್ರೀ ಮಹಾಗಣಪತಿ ದೇವಸ್ಥಾನ ಬಳಿ 13ನೇ ವರ್ಷದ ಶಾರದೋತ್ಸವವು ಸಂಭ್ರಮ ಸಡಗರದಿಂದ ನಡೆಯಲಿದೆ.
21ರಂದು ಬೆಳಿಗ್ಗೆ ಧ್ವಜಾರೋಹಣ, ಭಜನೆ, ಶಾಸ್ತ್ರೀಯ ಮತ್ತು ಸುಗಮ ಸಂಗೀತ, ಯಕ್ಷಗಾನ ವೈಭವ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. 22ರಂದು ಬೆಳಿಗ್ಗೆ ನಡೆಯುವ ಧಾರ್ಮಿಕ ಸಭೆಯಲ್ಲಿ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರ ರಮೇಶ ಭಟ್ ಮಾದೇರಿ ಅಧ್ಯಕ್ಷತೆ ವಹಿಸುವರು.
ವಿಧಾನಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ ಕಾರ್ಣಿಕ್, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಸುಲೋಚನಾ ಜಿ.ಕೆ.ಭಟ್, ತಾಲ್ಲೂಕು ಪಂಚಾಯಿತಿ ಸದಸ್ಯ ಬಿ.ಪದ್ಮಶೇಖರ ಜೈನ್, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಉದ್ಯಮಿ ಉಳಿಪಾಡಿಗುತ್ತು ರಾಜೇಶ ನಾಯ್ಕ್, ಮಾವಂತೂರು ಶ್ರೀ ಮಹಾಗಣಪತಿ ದೇವಳದ ಆಡಳಿತ ಮೊಕ್ತೇಸರ ಎಂ.ಪದ್ಮರಾಜ ಬಲ್ಲಾಳ್ ಮತ್ತಿತರ ಗಣ್ಯರು ಭಾಗವಹಿಸುವರು. ಇದೇ ವೇಳೆ ನೃತ್ಯ ವೈಭವ, ಬಲೇ ತೆಲಿಪಾಲೆ ಖ್ಯಾತಿಯ ‘ಕುಸಲ್ದ ಕುರ್ಲರಿ’ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಸಂಘಟನಾ ಕಾರ್ಯದರ್ಶಿ ಸಂತೋಷ್ ಕುಮಾರ್ ಬೆಟ್ಟು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *