ಬಂಟ್ವಾಳ: ಬಂಟ್ವಾಳ  ತಾಲೂಕಿನ ಬಿ.ಮೂಡಗ್ರಾಮದ ಗೂಡಿನ ಬಳಿ ನಿವಾಸಿಯೊಬ್ಬರು ಶಂಕಿತ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ.
ಮೃತರನ್ನು ಇಲ್ಲಿನ ಎಂ.ಕೆ. ರೋಡ್ ನಿವಾಸಿ ಇಬ್ರಾಹಿಂ ಎಂಬವರ ಪತ್ನಿ ಜಮೀಲ(63) ಎಂದು ಗುರುತಿಸಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಕಿಡ್ನಿಗೆ ಸಂಬಂಧಿಸಿದ ಕಾಯಿಲೆಯಿಂದ ಅನಾರೋಗ್ಯ  ಪೀಡಿತರಾಗಿದ್ದ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ನಡುವೆ ಅವರಿಗೆ ಡೆಂಗ್ಯೂ ಜ್ವರ ಬಾಧಿಸಿದೆ ಎಂದು ಹೇಳಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

By suddi9

Leave a Reply

Your email address will not be published. Required fields are marked *