ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದ ನಾಟಿಬೀದಿ ಶ್ರೀ ಕೋದಂಡರಾಮ ದೇವಸ್ಥಾನದಲ್ಲಿ ಜನವರಿ 16ರಿಂದ ನಡೆಯಲಿರುವ ಬ್ರಹ್ಮಕಲಶೋತ್ಸವ ಪ್ರಯುಕ್ತ ಸಂಪೂರ್ಣ ಹದಗೆಟ್ಟಿರುವ ಇಲ್ಲಿನ ಮೊಗರ್ನಾಡು-ನಾಟಿ ರಸ್ತೆ ವಿಸ್ತರಣೆ ಮತ್ತು ಡಾಂಬರೀಕರಣಗೊಳಿಸುವಂತೆ ಆಗ್ರಹಿಸಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್.ಪುರುಷೋತ್ತಮ ಬಂಗೇರ ನೇತೃತ್ವದ ನಿಯೋಗವು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರಿಗೆ ಈಚೆಗೆ ಮನವಿ ಸಲ್ಲಿಸಿದರು.
16btl-Manavi
ಕೆಡಿಪಿ ಸದಸ್ಯ ಉಮೇಶ ಬೋಳಂತೂರು, ರೋಟರಿ ಕ್ಲಬ್ಬಿನ ಮಾಜಿ ಅಧ್ಯಕ್ಷ ಎನ್.ಪ್ರಕಾಶ ಕಾರಂತ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕೃಷ್ಣಪ್ಪ ಪೂಜಾರಿ, ಎಪಿಎಂಸಿ ಮಾಜಿ ಉಪಾಧ್ಯಕ್ಷ ಕೃಷ್ಣಪ್ಪ ನಾಯ್ಕ್, ಪ್ರಮುಖರಾದ ವಿಠಲ ಕೋಟ್ಯಾನ್, ಜಿನರಾಜ ಕೋಟ್ಯಾನ್, ಯಶೋಧರ, ನಿತೇಶ ಸಪಲ್ಯ, ಸದಾನಂದ, ಜಯಂತಿ ಎಂ.ಎಸ್. ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *