ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಪ.ಪೂ ಕಾಲೇಜಿನ 4 ನೇ ವಾರ್ಷಿಕೋತ್ಸವ ಸಮಾರಂಭ ಶನಿವಾರ ರಾತ್ರಿ ನಡೆಯಿತು.
6mood Exelentಶ್ರೀಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಸಮಾರಂಭ ಅಧ್ಯಕ್ಷತೆ ವಹಿಸಿ, ಸ್ಪಷ್ಟ ಗುರಿ, ಮುಂದಾಲೋಚನೆ, ವ್ಯವಸ್ಥಿತ ಕಾರ್ಯವೈಖರಿ ಹಾಗೂ ಶಿಕ್ಷಣ ತಜ್ಞರ ಜೊತೆ ಸಮಾಲೋಚಿಸಿದರೆ ಶಿಕ್ಷಣ ಸಂಸ್ಥೆಯನ್ನು ಮುನ್ನಡೆಸಬಹುದು ಎಂದರು.
ಡಿ.ಹರ್ಷೇಂದ್ರ ಕುಮಾರ್ ಅವರನ್ನು ಎಕ್ಸಲೆಂಟ್ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.
ಸನ್ಮಾನ: ಕಳೆದ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಅತ್ಯಾಧಿಕ ಅಂಕ ಪಡೆದ ರಾಜೀವ್ ಹಾಗೂ ಕಿಶಾನ್ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಸಂಸ್ಥೆಯ ಕಟ್ಟಡಗಳ ಇಂಜಿನಿಯರ್ ರಾಜೇಶ್ ಬಂಗೇರ, ಗುತ್ತಿಗೆದಾರ ಮಧ್ವರಾಜ್, ಹಾಸ್ಟೆಲ್‍ಗಳ ಅಡುಗೆ ನಿರ್ವಾಹಕ ನಾರಾಯಣ ಅವರನ್ನು ಗೌರವಿಸಲಾಯಿತು.
ಅಳದಂಗಡಿ ಅರಮನೆಯ ಡಾ.ಪದ್ಮಪ್ರಸಾದ್ ಅಜಿಲ, ಮಂಗಳೂರಿನ ನಿವೃತ್ತ ಪ್ರಾಧ್ಯಾಪಕ ವೃಷಭರಾಜ ಜೈನ್ ಮುಖ್ಯ ಅತಿಥಿಯಾಗಿದ್ದರು. ಎಕ್ಸಲೆಂಟ್ ಕಾಲೇಜಿನ ಆಡಳಿತಮಂಡಳಿ ಅಧ್ಯಕ್ಷ ಯುವರಾಜ್ ಜೈನ್, ಆಡಳಿತಾಧಿಕಾರಿ ಡಾ.ಶ್ರುತಕೀರ್ತಿ ರಾಜ ಉಪಸ್ಥಿತರಿದ್ದರು.
ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಯುವರಾಜ್ ಜೈನ್ ಸ್ವಾಗತಿಸಿದರು. ಪ್ರಾಂಶುಪಾಲ ಸುರೇಶ್ ಬಾಬು, ಎಕ್ಸಲೆಂಟ್ ಪ್ರೌಢಶಾಲಾ ಮುಖ್ಯ ಶಿಕ್ಷಕ ಪ್ರದೀಪ್ ಅಂಚನ್ ವಾರ್ಷಿಕ ವರದಿ ವಾಚಿಸಿದರು. ದೀಪಿಕಾ ಪ್ರಭು, ಸುನೀತಾ ಪ್ರತಿಭಾನ್ವಿತ ವಿದ್ಯಾರ್ಥಿಗಳ ವಿವರ ನೀಡಿದರು. ನವೀನ್ ಮರಿಕೆ ಕಾರ್ಯಕ್ರಮ ನಿರೂಪಿಸಿದರು. ರವೀಂದ್ರನಾಥ ಬರ್ವೆ ವಂದಿಸಿದರು.

By suddi9

Leave a Reply

Your email address will not be published. Required fields are marked *