ಬಂಟ್ವಾಳ:ತಾಲ್ಲೂಕಿನ ಕುಕ್ಕಿಪಾಡಿ ಗ್ರಾಮದ ಎಲ್ಪೇಲು ಯುವಕ ಸಂಘ ಮತ್ತು ವಿಶ್ವಜ್ಯೋತಿ ಮಹಿಳಾ ಮಂಡಳಿ ವತಿಯಿಂದ ಇದೇ 26ರಂದು ಬೆಳಿಗ್ಗೆ 21ನೇ ವರ್ಷದ ಸಾರ್ವಜನಿಕ ಶನಿಪೂಜೆ ಮತ್ತು ವಾರ್ಷಿಕೋತ್ಸವ ನಡೆಯಲಿದೆ.
ಅಂದು ರಾತ್ರಿ ಎಂಟು ಗಂಟೆಗೆ ನಡೆಯುವ ಧಾರ್ಮಿಕ ಸಭೆಯಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನಿರ್ದೇಶಕ ವಿನ್ಸೆಂಟ್ ಪಾಯಸ್, ಉಪನ್ಯಾಸಕ ಪ್ರೊ.ನಾರಾಯಣ ಭಂಡಾರಿ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ.ತುಂಗಪ್ಪ ಬಂಗೇರ, ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ ಸುಂದರ ಶಾಂತಿ, ಬಂಟ್ವಾಳ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮೋಹನ್ ಕೆ.ಶ್ರೀಯಾನ್ ರಾಯಿ, ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಅಧ್ಯಕ್ಷ ವಸಂತ ಕುಮಾರ್ ಜೈನ್, ಗ್ರಾಮ ಪಂಚಾಯಿತಿ ಸದಸ್ಯರಾದ ಯೋಗೀಶ ಆಚಾರ್ಯ, ಲಿಂಗಪ್ಪ ಪೂಜಾರಿ, ಸುಜಾತ ರಾಜು ಪೂಜಾರಿ ಮತ್ತಿತರ ಗಣ್ಯರು ಭಾಗವಹಿಸುವರು.
ಇದೇ ವೇಳೆ ಡಾಕ್ಟರೇಟ್ ಗೌರವ ಪುರಸ್ಕೃತ ಉದ್ಯಮಿ ವರದರಾಜ ಪೈ, ರ್ಯಾಂಕ್ ವಿಜೇತ ವಿದ್ಯಾರ್ಥಿನಿ ನಳಿನಾಕ್ಷಿ ಪೂಜಾರಿ ಇವರನ್ನು ಸನ್ಮಾನಿಸಲಾಗುವುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *