ಬಂಟ್ವಾಳ:ತಾಲ್ಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯ ಪಾರೆಂಕಿ ಸಮೀಪದ ಮಾರಿಗುಡಿ ಎಂಬಲ್ಲಿ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಬೈಕ್ ಸವಾರರೊಬ್ಬರು ಗಂಭೀರ ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದೆ.ಗಾಯಾಳುವನ್ನು ಪುತ್ತೂರಿನ ಸವಣೂರು ನಿವಾಸಿ ಪ್ರಶಾಂತ್ ಎಂದು ಗುರುತಿಸಲಾಗಿದ್ದು, ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ