ಮಂಗಳೂರು: ಬಂಟರ ಯಾನೆ ನಾಡವರ ಮಾತೃಸಂಘ (ರಿ) ದ.ಕ. ಮಂಗಳೂರು ಇದರ 96ನೇ ವಾರ್ಷಿಕ ಸರ್ವ ಸದಸ್ಯರ ಸಭೆ ಡಿಸೆಂಬರ್ 29ರಂದು ಮಂಗಳವಾರ ಬೆಳಿಗ್ಗೆ 11ಗಂಟೆಗೆ ಬಂಟ್ಸ್ ಹಾಸ್ಟೆಲ್ನ ಎ.ಬಿ.ಶೆಟ್ಟಿ ಶತಮಾನೋತ್ಸವ ಸಭಾ ಭವನದಲ್ಲಿ ಜರಗಲಿದೆ. ಸರ್ವಸದಸ್ಯರ ಸಭೆಯ ಅಧ್ಯಕ್ಷತೆಯನ್ನು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷರಾದ ಮಾಲಾಡಿ ಅಜಿತ್ಕುಮಾರ್ ರೈ ವಹಿಸಲಿದ್ದಾರೆ. ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿಯವರಿಂದ ವಾರ್ಷಿಕ ವರದಿ ಮಂಡನೆ, ಕೋಶಾಧಿಕಾರಿಯವರಿಂದ ವಾರ್ಷಿಕ ಲೆಕ್ಕಪತ್ರಗಳ ಮಂಡನೆ ನಡೆಯಲಿದೆ. ಸಭೆಯಲ್ಲಿ ಸಂಘದ ಎಲ್ಲಾ ಸದಸ್ಯರು ಭಾಗವಹಿಸುವಂತೆ ಸಂಘದ ಪ್ರಧಾನ ಕಾರ್ಯದರ್ಶಿ ಮೇಘನಾಥ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.