ಬಂಟ್ವಾಳ ತಾಲ್ಲೂಕಿನ ಕಾವಳಮೂಡೂರು ಗ್ರಾಮದ ಕೆದ್ದಳಿಕೆ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ವತಿಯಿಂದ ನಿರ್ಮಿಸಲಾದ ನೂತನ ಅಯ್ಯಪ್ಪ ಮಂದಿರವನ್ನು ಒಡಿಯೂರು ಕ್ಷೇತ್ರದ ಗುರುದೇವಾನಂದ ಸ್ವಾಮೀಜಿ ಶನಿವಾರ ಉದ್ಘಾಟಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ್ ಪೂಂಜ, ತಂತ್ರಿ ಗಣಪತಿ ಮುಚ್ಚಿನ್ನಾಯ, ತಾಲ್ಲೂಕು ಪಂಚಾಯಿತಿ ಸದಸ್ಯ ಬಿ.ಪದ್ಮಶೇಖರ ಜೈನ್, ರಾಷ್ಟ್ರ ಪ್ರಶಸ್ತಿ ಪುರಸ್ಕøತ ಮುಖ್ಯ ಶಿಕ್ಷಕ ರಮೇಶ್ ನಾಯಕ್ ರಾಯಿ ಮತ್ತಿತರರು ಇದ್ದರು.
