ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಅಮ್ಮುಂಜೆ ಗ್ರಾಮದ ಮುಡಾಯಿಕೋಡಿ ಎಂಬಲ್ಲಿ ಸರಕಾರಿ ಜಮೀನು ಅತಿಕ್ರಮಣ ಮಾಡಿರುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಲು ತೆರಲಿದ್ದ ಅಧಿಕಾರಿ ಮತ್ತು ಸಿಬ್ಬಂದಿಗೆ ಬೆದರಿಕೆ ಹಾಕಿದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ ಘಟನೆ ಶನಿವಾರ ನಡೆದಿದೆ.
ಬಂಧಿತ ಆರೋಪಿಯನ್ನು ಇಲ್ಲಿನ ನಿವಾಸಿ ಮುಡಾಯಿಕೋಡಿ ನಿವಾಸಿ ರೋನಾಲ್ಡ್ ಡಿಸೋಜ ಎಂದು ಗುರುತಿಸಲಾಗಿದೆ.
ಈತನು ಸರ್ಕಾರಿ ಜಮೀನು ಅತಿಕ್ರಮಣಗೊಳಿಸಿ ಬಳಿಕ ಜೆಸಿಬಿ ಮೂಲಕ ಜಮೀನು ಸಮತಟ್ಟುಗೊಳಿಸುತ್ತಿರುವ ಬಗ್ಗೆ ಸ್ಥಳೀಯರು ಕಂದಾಯ ಇಲಾಖೆಗೆ ದೂರು ಸಲ್ಲಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದ ಇಲ್ಲಿನ ಪಿಡಿಒ ಮತ್ತು ಸಿಬ್ಬಂದಿಗೆ ರೊನಾಲ್ಡ್ ಡಿಸೋಜ ಅವರು ಅವಾಚ್ಯವಾಗಿ ನಿಂದಿಸಿ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿತ್ತು. ಇದಕ್ಕಾಗಿ ತಹಶೀಲ್ದಾರ್ ಪುರಂದರ ಹೆಗ್ಡೆ ನಿರ್ದೇಶನದಂತೆ ಗ್ರಾಮಾಂತರ ಠಾಣೆ ಪೆÇಲೀಸರು ಆತನನ್ನು ಶನಿವಾರ ಬಂಧಿಸಿರುವುದಾಗಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *