ಬಜ್ಪೆ: ಶ್ರೀನಿರಂಜನ ಸ್ವಾಮಿ ಪ್ರಥಮ ದರ್ಜೆ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ವತಿಯಿಂದ ವಿದ್ಯಾರ್ಥಿಗಳಿಗಾಗಿ ಆರೋಗ್ಯ ಮಾಹಿತಿ ಕಾರ್ಯಕ್ರಮವನ್ನು ಇತ್ತೀಚೆಗೆ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಲಲಿತಾ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಇವರು ಅಸಾಂಕ್ರಾಮಿಕ ರೋಗಗಳ ಹರಡುವಿಕೆ ಮತ್ತು ತಡೆಗಟ್ಟುವಿಕೆ ಎಂಬ ವಿಷಯದ ಬಗ್ಗೆ ಮಾಹಿತಿಯನ್ನು ನೀಡಿದರು.
ಅಧಿಕ ರಕ್ತದೊತ್ತಡ, ಮಧುಮೇಹ, ಕ್ಯಾನ್ಸರ್, ರಕ್ತ ಹೀನತೆ ರೋಗಗಳು ಬರದ ಹಾಗೆ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳುವ ಬಗೆಯನ್ನು ಸವಿವರವಾಗಿ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುರೇಶ್ ಕಟೀಲ್, ಅಧ್ಯಕ್ಷರು ಶಿಕ್ಷಕ ರಕ್ಷಕ ಸಂಘ ಇವರು ವಹಿಸಿದ್ದರು. ಪ್ರಾಂಶುಪಾಲರಾದ ಲತಾ ಕೆ, ರುದ್ರೇಶ್ ಆರೋಗ್ಯಾಧಿಕಾರಿ ಬಜ್ಪೆ, ಗಣೇಶ್ ಬಿ.ಎಂ., ಉಪಪ್ರಾಂಶುಪಾಲರು ಉಪಸ್ಥಿತರಿದ್ದರು.
ಉಪನ್ಯಾಸಕರಾದ ಸ್ವರ್ಣಲತಾ ಕಾರ್ಯಕ್ರಮ ನಿರೂಪಿಸಿದರು. ರೇಶ್ಮಾ ಸ್ವಾಗತಿಸಿ, ಶ್ರೀಮತಿ ಬಬಿತಾ ವಂದಿಸಿದರು.