ಬಂಟ್ವಾಳ:ತಾಲ್ಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಲಾರಿ ಚಾಲಕರೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ. ಮೃತರನ್ನು ಸ್ಥಳೀಯ ನಾಯಿಲ ನಿವಾಸಿ ವಿಜಯ ಪೂಜಾರಿ (60) ಎಂದು ಗುರುತಿಸಲಾಗಿದ್ದು, ಸೋಮವಾರ ಬೆಳಿಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೆಳಿಗ್ಗೆ ಮನೆಯ ಹೊರಗಿನ ಮಾಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.