ಬಂಟ್ವಾಳ: ಮೆಲ್ಕಾರ್ ಜಂಕ್ಷನ್ ಅಭಿವೃದ್ಧಿ ಕಾಮಗಾರಿ ನಡೆಯುವ ಸ್ಥಳಕ್ಕೆ ಕರ್ನಾಟಕ ಸರ್ಕಾರದ ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವರಾದ ಬಿ. ರಮಾನಾಥ ರೈಯವರು ಭೇಟಿ ನೀಡಿ ಕಾಮಗಾರಿ ಪ್ರಗತಿ ಪರಿಶೀಲಿಸಿದರು.

ಮೆಲ್ಕಾರ್ನಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಬಸ್ಸುಗಳು ಪ್ರಯಾಣಿಕರನ್ನು ಹತ್ತಿಸಿಕೊಳ್ಳುವಲ್ಲಿ ರಸ್ತೆ ಅಗಲೀಕರಣಕ್ಕೆ ಉದ್ದೇಶಿಸಲಾಗಿದ್ದು ಈ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಇಂಜಿನಿಯರ್ಗಳಿಗೆ ಸಚಿವರು ಸೂಚಿಸಿದರು. ಈ ರಸ್ತೆಯ ಪಕ್ಕದಲ್ಲಿ ಪಾದಚಾರಿಗಳಿಗೆ ಫುಟ್ಪಾತ್ ನಿರ್ಮಾಣ ಹಾಗೂ ಪ್ರಯಾಣಿಕರಿಗೆ ಸುಸಜ್ಜಿತ ತಂಗುದಾಣ ನಿರ್ಮಾಣದ ಬಗ್ಗೆ ಚರ್ಚಿಸಲಾಯಿತು.
ಮೆಲ್ಕಾರ್ನಿಂದ ಮಾರ್ನಬೈಲು ರಸ್ತೆ ಅಗಲಗೊಳಿಸುವ ಕಾಮಗಾರಿ ತ್ವರಿತಗತಿಯಲ್ಲಿ ಸಾಗುತ್ತಿದ್ದು, ಇಲ್ಲಿರುವ ವಿದ್ಯುತ್ ಕಂಬಗಳ ಸ್ಥಳಾಂತರವನ್ನು ಒಂದು ವಾರದೊಳಗೆ ಪೂರ್ಣಗೊಳಿಸಲು ಸಂಬಂಧಪಟ್ಟ ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ಬಂಟ್ವಾಳ ಪುರಸಭೆ ಅಧ್ಯಕ್ಷರಾದ ರಾಮಕೃಷ್ಣ ಆಳ್ವ, ಉಪಾಧ್ಯಕ್ಷರಾದ ಮಹಮ್ಮದ್ ನಂದರಬೆಟ್ಟು, ಬುಡಾ ಅಧ್ಯಕ್ಷರಾದ ಪಿಯೂಸ್ ಎಲ್.ರೊಡ್ರಿಗಸ್, ಜಿಲ್ಲಾಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪುರಸಭೆ ಸದಸ್ಯರಾದ ಸಂಜೀವಿನಿ, ಜೆಸಿಂತ ಡಿ’ಸೋಜ, ಪ್ರಮುಖರಾದ ಅಬ್ಬಾಸ್ ಆಲಿ, ರಫೀಕ್ ಹಾಜಿ, ದಾಮೋದರ್ ಮೆಲ್ಕಾರ್, ಪ್ರಕಾಶ್ ಕಾರಂತ, ಸಂಜೀವ ಪೂಜಾರಿ, ಅಹ್ಮದ್, ಶರೀಫ್, ಗಣಪತಿ ಭಟ್, ರಾಮ್ರಾಜ್ ರಾವ್ ಮೊದಲಾದವರು ಉಪಸ್ಥಿತರಿದ್ದರು.
ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಗಣೇಶ್ ಅರಳಿಕಟ್ಟೆ, ಸಹಾಯಕ ಇಂಜಿನಿಯರ್ ಉಮೇಶ್ ಭಟ್, ರಾಷ್ಟ್ರೀಯ ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅಬ್ದುಲ್ ರಹಿಮಾನ್, ಸಂಚಾರಿ ಪೋಲೀಸ್ ಠಾಣೆಯ ಚಂದ್ರಶೇಖರಯ್ಯ ಪುರಸಭೆ ಮುಖ್ಯಾಧಿಕಾರಿ ಸುಧಾಕರ್,ಪರಿಸರ ಅಧಿಕಾರಿ ರಾಜಶೇಖರ್ ಪುರಾಣಿಕ್ ಮೊದಲಾದ ಅಧಿಕಾರಿಗಳು ಹಾಜರಿದ್ದು ಸಚಿವರಿಗೆ ಪೂರಕ ಮಾಹಿತಿ ನೀಡಿದರು.