ಬಂಟ್ವಾಳ ತಾಲ್ಲೂಕಿನ ಸಜಿಪಮುನ್ನೂರು ಗ್ರಾಮದ ಮುದೆಲ್‍ಮುಟ್ಟಿ ಎಂಬಲ್ಲಿ ರೂ. ಒಂದು ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ನಾಲ್ಕೈತ್ತಾಯ ದೈವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶನಿವಾರ ಭೇಟಿ ನೀಡಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎ.ಸಿ.ಭಂಡಾರಿ, ಕಾರ್ಯದರ್ಶಿ ಎಂ.ಸುಬ್ರಹ್ಮಣ್ಯ ಭಟ್, ಎಂ.ಪರಮೇಶ್ವರ, ತಾಲ್ಲೂಕು ಪಂಚಾಯಿತಿ ಸದಸ್ಯ ಕೆ.ಸಂಜೀವ ಪೂಜಾರಿ, ಅಬ್ಬಾಸ್ ಆಲಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಗಣಪತಿ ಭಟ್ ಮತ್ತಿತರರು ಇದ್ದರು.
