ಬಂಟ್ವಾಳ: ತಾಲ್ಲೂಕಿನ ರಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ಶಂಕಿತ ಡೆಂಗೆ ಜ್ವರ ಬಾಧೆ ಕಾಣಿಸಿಕೊಂಡಿದ್ದು, ಇಲ್ಲಿನ ರಾಯಿ ಪೇಟೆ ರಿಕ್ಷಾ ನಿಲುಗಡೆ ಬಳಿ ತೆರೆದ ಚರಂಡಿ ಶುಚಿಗೊಳಿಸಿ ಮುಚ್ಚುವಂತೆ ನಾಗರಿಕು ಆಗ್ರಹಿಸಿದ್ದಾರೆ. ಇಲ್ಲಿನ ರಾಯಿ ಸರ್ಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಈ ಹಿಂದೆ ಚಿಕುನ್ಗುನ್ಯಾ ನೋವು ಅನುಭವಿಸಿದ್ದ ಅರಳ, ರಾಯಿ ,ಹೋರಂಗಳ, ಕುದ್ಮಾಣಿ, ಕೈತ್ರೋಡಿ ಮತ್ತಿತರ ಕಡೆಗಳಲ್ಲಿ ಇದೀಗ ಮತ್ತೆ ಶಂಕಿತ ಡೆಂಗೆ ಜ್ವರ ಕಾಣಿಸಿಕೊಂಡಿದೆ.
18btl-Rayee
ಈಗಾಗಲೇ ಇಬ್ಬರು ಮಕ್ಕಳು ಸಹಿತ ಒಟ್ಟು ಆರು ಮಂದಿಗೆ ಶಂಕಿತ ಡೆಂಗೆ ಪ್ರಕರಣ ಕಾಣಿಸಿಕೊಂಡಿದ್ದು, ಮಂಗಳೂರು ಮತ್ತು ಬಿ.ಸಿ.ರೋಡ್ ಸಹಿತ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಮೊರೆ ಹೋಗಿದ್ದಾರೆ. ರಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿಗೆ ಸಮರ್ಪಕ ವ್ಯವಸ್ಥೆ ಒದಗಿಸುವಲ್ಲಿ ಪಂಚಾಯಿತಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಇಲ್ಲಿನ ನಾಗರಿಕರು ಆರೋಪಿಸಿದ್ದಾರೆ.

ಇಲ್ಲಿನ ಡೆಂಗೆಪೀಡಿತ ಪ್ರದೇಶಗಳಿಗೆ ಫಾಗಿಂಗ್ ನಡೆಸಲಾಗಿದ್ದು, ಆಶಾ ಕಾರ್ಯಕರ್ತೆಯರು ಸಹಿತ ಆರೋಗ್ಯ ಸಹಾಯಕರು ಕರಪತ್ರ ಮೂಲಕ ಜನತೆಯಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಸಮರ್ಥಿಸಿಕೊಂಡಿದೆ.

By suddi9

Leave a Reply

Your email address will not be published. Required fields are marked *