ಬಂಟ್ವಾಳ:ತಾಲ್ಲೂಕಿನ ತುಂಬೆ ನೇತ್ರಾವತಿ ನದಿಯಿಂದ ತೆಗೆದು ಸಂಗ್ರಹಿಸಿ ಬಳಿಕ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರನ್ನು ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ರಕ್ಷಿತ್ ಕುಮಾರ್ ನೇತೃತ್ವದ ಪೊಲೀಸರು ಶನಿವಾರ ಸಂಜೆ ವಶಪಡಿಸಿಕೊಂಡಿದ್ದಾರೆ. ಇದೇ ವೇಳೆ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿಸಿದ್ದಾರೆ.