ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಇದರ ಒಕ್ಕೂಟದ ನೂತನ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರವು ವಿಟ್ಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ಜರಗಿತು. ಕಾರ್ಯಕ್ರಮವನ್ನು ವಿಟ್ಲ ವಲಯ ಅಧ್ಯಕ್ಷ ನರಸಿಂಹ ಬಳ್ಳಾಲ್ ಉದ್ಘಾಟಿಸಿದರು. ವಿಟ್ಲ ವಲಯ ಮೇಲ್ವಿಚಾರಕ ಜನಾರ್ಧನ ಪ್ರಾಸಾವಿಸಿದರು. ಸಂಪನ್ಮೂಲ ವ್ಯಕ್ತಿ ಕೃಷಿ ಅಧಿಕಾರಿ ನಾರಾಯಣ ನಾಯಕತ್ವ, ಒಕ್ಕೂಟದ ಸಭೆ ಬಗ್ಗೆ ಮಾಹಿತಿ ನೀಡಿದರು. ಬಂಟ್ವಾಳ ತಾಲೂಕು ಯೋಜನಾಧಿಕಾರಿ ಸುನಿತಾ ನಾಯಕ್ ಪ್ರಗತಿ ನಿಧಿ ಜೀವವಿಮಾ ಭದ್ರತೆ ಬಗ್ಗೆ ಮಾಹಿತಿ ನೀಡಿದರು. ವಿಟ್ಲ ಬಿ ಒಕ್ಕೂಟದ ಅಧ್ಯಕ್ಷ ಸುಂದರ ಆಚಾರ್ಯ ಅನಿಸಿಕೆ ವ್ಯಕ್ತ ಪಡಿಸಿದರು. ಸೇವಾ ಪ್ರತಿನಿಧಿ ಜನಾರ್ಧನ ಪದ್ಮಶಾಲಿ ಸ್ವಾಗತಿಸಿದರು. ರಾಜೇಂದ್ರ ರೈ ವಂದಿಸಿದರು. ಸೇವಾ ಪ್ರತಿನಿಧಿ ಸರಿತಾ ಕಾರ್ಯಕ್ರಮ ನಿರೂಪಿಸಿದರು.
