ಮೂಡುಬಿದಿರೆ: ಭಿನ್ನ ಸಾರ್ಮಥ್ರ್ಯರನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡುವಂತಹ ಕೆಲಸ ದೇವರು ಮೆಚ್ಚುವ ಕೆಲಸ. ಭಿನ್ನ ಸಾಮಥ್ರ್ಯರಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿಯನ್ನು ನೀಡಿ ಅವರ ಜೀವನೋತ್ಸವವನ್ನು ಹೆಚ್ಚಿಸಿ ಮುಖ್ಯವಾಹಿನಿಯತ್ತ ಸೆಳೆಯುವಂತಹ ಕಾರ್ಯಕ್ರಮವನ್ನು ತೆಂಕಮಿಜಾರು ಗ್ರಾಮ ಪಂಚಾಯಿತಿ ಆಯೋಜಿಸಿರುವುದು ಪ್ರಶಂಸನೀಯ. ಇಂತಹ ಕಾರ್ಯಕ್ರಮಗಳನ್ನು ಪ್ರತಿ ಗ್ರಾಮ ಪಂಚಾಯತ್ಗಳು ಇಂತಹ ಕೆಲಸಗಳನ್ನು ಮಾಡಿದರೆ ಭಿನ್ನ ಸಾಮಥ್ರ್ಯರಿಗೆ ಅನುಕೂಲವಾಗುತ್ತದೆ ಎಂದು ಶಾಸಕ, ಮಾಜಿ ಸಚಿವ ಕೆ.ಅಭಯಚಂದ್ರ ಹೇಳಿದರು.
ಅವರು ತೆಂಕಮಿಜಾರು ಗ್ರಾಮ ಪಂಚಾಯಿತಿ ನೇತೃತ್ವದಲ್ಲಿ ತೋಡಾರಿನ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಪಂಚಾಯತ್ ವ್ಯಾಪ್ತಿಯಲ್ಲಿರುವ ವಿಲಕಚೇತನರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಹಾಗೂ ಅವರ ಜೀವನೋತ್ಸಾಹವನ್ನು ಹೆಚ್ಚಿಸುವ ಅಂಗವಾಗಿ ಏರ್ಪಡಿಸಿರುವ `ಭಿನ್ನ ಸಾಮಥ್ರ್ಯರೊಂದಿಗೆಒಂದು ಆತ್ಮೀಯ ಕೂಟ’ ಹಾಗೂ ಸರ್ಕಾರದ ಆದೇಶದಂತೆ ನಾಗರಿಕರಿಗೆ ವಿವಿಧ ಸೇವೆಗಳನ್ನು ಒದಗಿಸುವ ಏಕಗವಾಕ್ಷಿ ಯೋಜನೆಯಾದ `ಪಂಚಾಯತ್-100-ಬಾಪೂಜಿ ಸೇವಾ ಕೇಂದ್ರ’ವನ್ನು ಶುಕ್ರವಾರ ಉದ್ಘಾಟಿಸಿ, ಪಂಚಾಯಿತಿ ಅಧ್ಯಕ್ಷರಿಗೆ ಪಹಣಿಪತ್ರವನ್ನು ವಿತರಿಸಿ ಮಾತನಾಡಿದರು.
ಪಂಚಾಯಿತಿ ಸದಸ್ಯರು ಬಡಜನರ ಸೇವೆಗಳಿಗೆ ಸ್ಪಂದಿಸುವಲ್ಲಿ ಆಸಕ್ತಿ ವಹಿಸಬೇಕಾಗಿದೆ. ಮನೆ, ನಳ್ಳಿ ನೀರಿನ ವ್ಯವಸ್ಥೆ, ದಾರಿದೀಪ ಹಾಗೂ ಪಡಿತರ ಸಹಿತ ಇತರ ಅಗತ್ಯ ಕೆಲಸಗಳನ್ನು ಮಾಡುವಲ್ಲಿ ಸದಸ್ಯರು ಯಾವಾಗಲೂ ಮುಂಚೂಣಿಯಲ್ಲಿರಬೇಕೆಂದು ಸಲಹೆ ನೀಡಿದರು.

ಪಂಚಾಯಿತಿ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ ಅಧ್ಯಕ್ಷತೆ ವಹಿಸಿದರು.
ಲಯನ್ಸ್ ಕ್ಲಬ್ ಅಧ್ಯಕ್ಷ ರಮೇಶ್ ಶೆಟ್ಟಿ ಮರಿಯಡ್ಕ ಮುಖ್ಯ ಅತಿಥಿಯಾಗಿ ಭಾಗವಹಿಸಿ ಭಿನ್ನ ಸಾಮಥ್ರ್ಯರಿಗೆ ಸಹಾಯಧನದ ಚೆಕ್ ವಿತರಿಸಿದರು.
ಸನ್ಮಾನ: ಮುಖವಾಡ ತಯಾರಿಸುವ ಮೂಲಕ ಗ್ರಾಮದಲ್ಲಿ ವಿಶೇಷ ಸಾಧನೆ ಮಾಡಿರುವ ಬಾಬು ಪರವ, ಶ್ರೀಮತಿ ಮೋಹಿನಿ ಅಪ್ಪಾಜಿ ನಾಯ್ಕ್ ಸ್ಮಾರಕ ಆಳ್ವಾಸ್ ವಿಶೇಷ ಶಾಲೆಯ ಪರವಾಗಿ ಶಾಲೆಯ ಮುಖ್ಯ ಶಿಕ್ಷಕಿ ಅನಿತಾ ಅವರನ್ನು ಗೌರವಿಸಲಾಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಜೈನ ಪ್ರೌಢಶಾಲೆಯ ಶಿಕ್ಷಕ ನಿತೇಶ್ ಬಲ್ಲಾಳ್ `ಜೀವನೋತ್ಸಾಹದ ಮಾತುಗಳು’, ಪತ್ರಕರ್ತ ಕಿರಣ್ ಮಂಜನಬೈಲು 1ವಿಕಲಚೇತನರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ’ಯನ್ನು ನೀಡಿದರು.
ಜಿ.ಪಂ ಸದಸ್ಯ ಕೆ.ಪಿ ಸುಚರಿತ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.ಪಿಡಿಒ ಸಾಯೀಶ ಚೌಟ ಸ್ವಾಗತಿಸಿದರು. ರಾಕೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.