ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆ ಹಾಗೂ ಕರ್ನಾಟಕ ಬಾಲ್‍ಬ್ಯಾಡ್ಮಿಂಟನ್ ಸಂಸ್ಥೆಯ ಜಂಟಿ ಆಶ್ರಯದಲ್ಲಿ ವಿದ್ಯಾಗಿರಿ ಕ್ಯಾಂಪಸ್‍ನಲ್ಲಿ ಜರುಗಿದ ರಾಜ್ಯಮಟ್ಟದ ಆಹ್ವಾನಿತ ಬಾಲ್‍ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಅತಿಥೇಯ ಆಳ್ವಾಸ್ ಪುರುಷರ ತಂಡ ಪ್ರಶಸ್ತಿಯನ್ನು ಜಯಿಸಿದೆ.

mbd_aug22_5
ಲೀಗ್ ಹಾಗೂ ನಾಕೌಟ್ ಮಾದರಿಯಲ್ಲಿ ಜರುಗಿದ ಪಂದ್ಯಾಟದ ಅಂತಿಮ ಹಣಾಹಣಿಯಲ್ಲಿ ಆಳ್ವಾಸ್ ತಂಡ ಬೆಂಗಳೂರಿನ ಕೆನರಾ ಬ್ಯಾಂಕ್ ತಂಡವನ್ನು 35-30 ಹಾಗೂ 35-22 ನೇರ ಸೆಟ್‍ಗಳಿಂದ ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿತು. ಸೆಮಿಫ್ಯನಲ್ ಪಂದ್ಯಾಟಗಳಲ್ಲಿ ಆಳ್ವಾಸ್ ತಂಡ ಬನಶಂಕರಿ ಸ್ಪೋಟ್ರ್ಸ್ ಕ್ಲಬ್ ತಂಡವನ್ನು ಹಾಗೂ ಕೆನರಾ ಬ್ಯಾಂಕ್ ತಂಡ ಚಾಮರಾಜನಗರ ತಂಡವನ್ನು ಸೋಲಿಸಿ ಫೈನಲ್ ತಲುಪಿತು. ಆಳ್ವಾಸ್ ತಂಡದ ರಂಜಿತ್ ಟೂರ್ನಿಯ ಅತ್ಯುತ್ತಮ ಆಟಗಾರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

By suddi9

Leave a Reply

Your email address will not be published. Required fields are marked *