ಬಂಟ್ವಾಳ; ವಿದ್ಯಾರ್ಥಿ ದೆಸೆಯಲ್ಲಿ ಕಲಿಕೆಯ ಜೊತೆಗೆ ಕ್ರೀಡಾ ಸ್ಪೂರ್ತಿಯನ್ನು ಬೆಳೆಸಿಕೊಳ್ಳುವುದು ಶಾರೀರಿಕ ಸಧೃಡತೆಗೆ ಪೂರಕ ಎಂದು ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ವಾಲ್ಟರ್ ಡಿಮೆಲ್ಲೋ ಹೇಳಿದ್ದಾರೆ.ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಕ್ರೀಡಾಂಗಣದಲ್ಲಿ ದ.ಕ.ಜಿಲ್ಲಾಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವ ಸ್ಪರ್ಧಾಳುಗಳಿಗೆ ಕ್ರೀಡಾಸ್ಪೂರ್ತಿ ಅಗತ್ಯ ಎಂದ ಅವರು, ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಲಾಖೆ ಇಂತಹಾ ಕ್ರೀಡಾಕೂಟಗಳನ್ನು ಆಯೋಜಿಸುತ್ತಿದೆ ಎಂದರು.

img-20160909-wa0003
ಶಾಲಾ ಸಂಚಾಲಕ ಪ್ರಹ್ಲಾದ್ ಜೆ ಶೆಟ್ಟಿಯವರು ಮಾತನಾಡಿ, ಕ್ರೀಡಾಕೂಟದ ಆತಿಥ್ಯಕ್ಕೆ ಶಿಕ್ಷಣ ಇಲಾಖೆಯೇ ಪ್ರೇರಣೆಯಾಗಿದೆ ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ತಾ.ಪಂ.ಸದಸ್ಯೆ ಮಂಜುಳಾ ಕುಶಲ ಗೌಡ, ಮಾಣಿ ಗ್ರಾಮಪಂಚಾಯತ್ ಅಧ್ಯಕ್ಷೆ ಮಮತಾ ಶೆಟ್ಟಿ, ¨ಂಟ್ವಾಳ ದೈಹಿಕ ಶಿಕ್ಷಣ ಪರಿವೀಕ್ಷಕ ಗುರುನಾಥ್ ಬಾಗೇವಾಡಿ ಶುಭಹಾರೈಸಿದರು. ವೇದಿಕೆಯಲ್ಲಿ ಬಂಟ್ವಾಳ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು, ಕಲ್ಲಡ್ಕ ವಲಯದ ಶಿಕ್ಷಣ ಸಂಯೋಜಕಿ ಪುಷ್ಪಾ, ಸಮೂಹ ಸಂಪನ್ಮೂಲ ವ್ಯಕ್ತಿ ಜಯಲಕ್ಷ್ಮೀ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ್, ಪದಾಧಿಕಾರಿಗಳಾದ ಗಂಗಾಧರ್, ರಾಧಾಕೃಷ್ಣ ಅಡ್ಯಂತಾಯ, ಪುತ್ತೂರು ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡ , ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಡಾ.ಬಿ.ಎಸ್. ನಾಯ್ಕ್, ಉಪಾಧ್ಯಕ್ಷ ಅಪ್ರಾಯ ಪೈ , ಕಾರ್ಯದರ್ಶಿ ನಾರಾಯಣ ಶೆಟ್ಟಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಕೆ.ಬಾಲಕೃಷ್ಣ ಆಳ್ವ, ಉಪಾಧ್ಯಕ್ಷೆ ಲಕ್ಷ್ಮೀ ಟೀಚರ್, ಶಾಲಾ ಆಡಳಿತಾಧಿಕಾರಿ ಸಿ.ಶ್ರೀಧರ್, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಗ್ರೇಸ್.ಪಿ.ಸಲ್ಡಾನ ಉಪಸ್ಥಿತರಿದ್ದರು.
ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ವಿ ಶೆಟ್ಟಿ ಸ್ವಾಗತಿಸಿ, ವಂದಿಸಿದರು. ಶಿಕ್ಷಕಿಯರಾದ ಸುಧಾ ಎನ್.ರಾವ್ ಮತ್ತು ಯಜ್ಞೇಶ್ವರಿ ಎಸ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಜಿಲ್ಲೆಯ ಏಳು ವಲಯಗಳ 27 ತಂಡಗಳು ಕ್ರೀಡಾ ಕೂಟದಲ್ಲಿ ಭಾಗವಹಿಸಿದ್ದರು.

By suddi9

Leave a Reply

Your email address will not be published. Required fields are marked *