ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಪಂಜಿಕಲ್ಲು ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯ ಅಶೋಕ್ ಐತಾಳ್ ಇವರಿಗೆ ಜಿಲ್ಲಾ ಮಟ್ಟದ ಉತ್ತಮ ಹೈನುಗಾರ ಪ್ರಶಸ್ತಿಯನ್ನು ಹಾಲು ಉತ್ಪಾದಕರ ಸಹಕಾರಿ ಒಕ್ಕೂಟ ಅಧ್ಯಕ್ಷ ರವಿರಾಜ್ ಹೆಗ್ಡೆ ಅವರು ಭಾನುವಾರ ವಿತರಿಸಿದರು. ಸಂಘದ ಅಧ್ಯಕ್ಷ ಪ್ರಕಾಶ ಕುಮಾರ್ ಜೈನ್ ಪೀರ್ದಬೆಟ್ಟು, ಕಾರ್ಯದರ್ಶಿ ಆನಂದ ಬುರಾಲ್ ಮತ್ತಿತರರು ಇದ್ದರು.
