ಬಂಟ್ವಾಳ: ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗಾಗಿ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸುಜೀರು ಸರಕಾರಿ ಪ್ರೌಢಶಾಲೆಯ ಶಾಲಾಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ , ಜಿ. ಪಂ. ಮಾಜಿ ಸದಸ್ಯ ಉಮ್ಮರ್ ಫಾರೂಕ್ ಹೇಳಿದರು.

btw_sep17_5

ಅವರು ಶನಿವಾರ ಶಾಲಾ ವಿದ್ಯಾರ್ಥಿಗಳಿಗೆ ಸರಕಾರದಿಂದ ದೊರೆತ ಸಮವಸ್ತ್ರವನ್ನು ವಿತರಿಸಿ ಮಾತನಾಡಿದರು. ಖಾಸಗಿ ಶಾಲೆಗಳಲ್ಲಿ ಹೆಚ್ಚುವರಿ ಶುಲ್ಕ ಪಡೆದು ಕರಾಟೆ ಮತ್ತಿತರ ತರಗತಿಗಳನ್ನು ನಡೆಸಲಾಗುತ್ತದೆ. ಆದರೆ ವಿದ್ಯಾರ್ಥಿಗಳ ಪ್ರಗತಿಯ ಹಿತದೃಷ್ಟಿಯಿಂದ ಕರಾಟೆ ತರಗತಿಯನ್ನು ಆರಂಭಿಸಿದ್ದು ಉಚಿತವಾಗಿ ಕಲಿಸಿಕೊಡಲಾಗುತ್ತದೆ ಎಂದರು.

ಶಾಲೆಯ ಮುಖ್ಯ ಶಿಕ್ಷಕಿ ಶಶಿಮಂಗಳ, ಶಿಕ್ಷಕ ಬಿ. ಎಂ. ತುಂಬೆ, ಶಾಲಾಭಿವೃದ್ದಿ ಸಮಿತಿ ಸದಸ್ಯ ಸಲಾಂ ಮಲ್ಲಿ ಹಾಜರಿದ್ದರು. ಶಿಕ್ಷಕ ಜಯಪ್ರಕಾಶ್ ಸ್ವಾಗತಿಸಿ, ವಂದಿಸಿದರು.

By suddi9

Leave a Reply

Your email address will not be published. Required fields are marked *