ಮೂಡುಬಿದಿರೆ: ದ.ಕ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ ಮತ್ತು ಸರಕಾರಿ ಪ್ರೌಢಶಾಲೆ ದರೆಗುಡ್ಡೆಇವುಗಳ ಸಹಯೋಗದಲ್ಲಿ ದರೆಗುಡ್ಡೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮತ್ತು ಬಾಲಕಿಯರ ಜಿಲ್ಲಾ ಮಟ್ಟದ ಬಾಲ್‍ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಮಂಗಳೂರು ದಕ್ಷಿಣದ ಸರ್ಕಾರಿ ಮುಸ್ಲಿಂ ವಸತಿ ಶಾಲೆ ನಾಟೆಕಲ್ ಮತ್ತು ಬಾಲಕಿಯರ ವಿಭಾಗದಲ್ಲಿ ಶ್ರೀದುರ್ಗಾಪರಮೇಶ್ವರೀ ಅನುದಾನಿತ ಹಿ.ಪ್ರಾ.ಶಾಲೆ ಕಟೀಲು ಪ್ರಥಮ ಸ್ಥಾನವನ್ನು ಗಳಿಸಿಕೊಂಡಿದೆ.

mbd_sep21_2-kateelu

ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಬಂಟ್ವಾಳದ ದೀಪಿಕಾ ಪ್ರೌಢಶಾಲೆ ಮೊಡಂಕಾಪು ಬಾಲಕಿಯರ ವಿಭಾಗದಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಸುಳ್ಯ ದ್ವಿತೀಯ ಸ್ಥಾನವನ್ನು ಪಡೆದಿದೆ.

mbd_sep21_2-natekal

ಸಂಜೆ ದರೆಗುಡ್ಡೆ ವಿಠಲ ದೇವಸ್ಥಾನದ ವೇ.ಮೂ.ನಾಗರಾಜ್ ಭಟ್ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆಯ ದೈಹಿಕ ಪರಿವೀಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ, ಹಿರಿಯ ನೀಲಯ್ಯ ಮೂಲ್ಯ, ಎಸ್.ಡಿ.ಎಂ.ಸಿ. ಅಧ್ಯಕ್ಷ ಭಾಸ್ಕರ, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ಅಂಬೂರಿ, ಉಪಾಧ್ಯಕ್ಷರಾದ ವಸಂತ, ಭರತೇಶ್, ದರೆಗುಡ್ಡೆ ಫ್ರೆಂಡ್ಸ್ ಸರ್ಕಲ್‍ನ ಅಶೋಕ್ ಸುವರ್ಣ ಉಪಸ್ಥಿತರಿದ್ದು, ಬಹುಮಾನ ವಿತರಿಸಿದರು. ಹಿರಿಯ ಶಿಕ್ಷಕ ಶೇಖರ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕಿ ಅನ್ನಪೂರ್ಣೇಶ್ವರೀ ವಂದಿಸಿದರು.

By suddi9

Leave a Reply

Your email address will not be published. Required fields are marked *