ಬಂಟ್ವಾಳ : ಲೋಕೋಪಯೋಗಿ ಉಪವಿಭಾಗದಲ್ಲಿ ಸಹಾಯಕ ಇಂಜಿನಿಯರ್ ಆಗಿ ಸುಮಾರು 21ವರ್ಷಗಳ ಕಾಲ ಸೇವೆ ಸಲ್ಲಿಸಿದ ಬಿ.ಎನ್. ಚಿದಂಬರ ಸ್ವಾಮಿಯವರು ಇದೀಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹುದ್ದೆಗೆ ಪದೋನ್ನತಿ ಹೊಂದಿ ವರ್ಗಾವಣೆಗೊಂಡು ಪ್ರಸ್ತುತ ಕರ್ನಾಟಕ ನೀರಾವರಿ ನಿಗಮ ನಿಯಮಿತ ಬೆಂಗಳೂರು ಇದರ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ತಾಂತ್ರಿಕ ಸಹಾಯಕರಾಗಿ ನಿಯುಕ್ತಿಗೊಂಡಿರುವ ಇವರನ್ನು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉಮೇಶ್ ಭಟ್ ಸನ್ಮಾನಿಸಿ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಇಂಜಿನಿಯರುಗಳಾದ ಅರುಣ್ ಪ್ರಕಾಶ್, ಪ್ರೀತಮ್, ಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು.
