ಬಂಟ್ವಾಳ: ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಶನಿವಾರ ಆರಂಭಗೊಂಡ ಒಂದು ವಾರಗಳ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಮುಂಬೈ ಗೋರಕ್ಷಕಿ ಸೀತಾವರ್ಮ ಉದ್ಘಾಟಿಸಿದರು.
ಶಾಲಾ ಮುಖ್ಯಸ್ಥ ಡಾ.ಕೆ.ಪ್ರಭಾಕರ ಭಟ್, ಸಂಚಾಲಕ ವಸಂತ ಮಾಧವ, ಕೋಶಾಧಿಕಾರಿ ಸತೀಶ ಭಟ್ ಶಿವಗಿರಿ, ಪ್ರಾಥಮುಖ್ಯಶಿಕ್ಷಕ ರವಿರಾಜ್ ಕಣಂತೂರು, ಶಾಲಾಭಿವೃದ್ದಿ ಸಮಿತಿ ಸದಸ್ಯರಾದ ಶಿವಾಜಿ ಭಟ್, ಪದ್ಮನಾಭ ಪಿ.ಕೆ. ಮತ್ತಿತರರು ಉಪಸ್ಥಿತರಿದ್ದರು.
