ಮೂಡುಬಿದಿರೆ: ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ ಆಶ್ರಯದಲ್ಲಿ ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಕ್ಲಬ್‍ನ ಅಧ್ಯಕ್ಷ ರಾಜೇಶ್ ಬಂಗೇರ, ಕಾರ್ಯದರ್ಶಿ ಹರೀಶ್, ನಿಕಟಪೂರ್ವ ಅಧ್ಯಕ್ಷ ಉಮೇಶ್ ರಾವ್ ಪದಾಧಿಕಾರಿಗಳು ಉಪಸ್ಥಿತರಿದ್ದರು. ವಂದೇ ಮಾತರಂ ಸ್ವಸಹಾಯ ಸಂಘಗಳ 330 ಸದಸ್ಯರು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.
